ಶಿವಮೊಗ್ಗ

ಇಎಸ್ಐಸಿ ಆಸ್ಪತ್ರೆಗಳಲ್ಲಿ ಒಪಿಡಿ ಆರಂಭಿಸಲು ಸೂಚನೆ: ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಕ್ರಮದ ಎಚ್ಚರಿಕೆ

ಶಿವಮೊಗ್ಗದಲ್ಲಿ ಇಎಸ್ಐಸಿ ಅಧಿಕಾರಿಗಳು, ವೈದ್ಯರು ಮತ್ತು ಕಾರ್ಮಿಕ ಮುಖಂಡರೊಂದಿಗೆ ಸಭೆ ನಡೆಸಿದ ಶಾಸಕ ಎಸ್.ಎನ್. ಚನ್ನಬಸಪ್ಪ, ಇಎಸ್ಐ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆ ತಕ್ಷಣ ಆರಂಭಿಸಲು ಸೂಚಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಇಎಸ್ಐಸಿ ಕಾರ್ಡ್‌ದಾರರಿಗೆ ಚಿಕಿತ್ಸೆ ನಿರ್ಲಕ್ಷ್ಯವಾದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇಎಸ್ಐಸಿ ಆಸ್ಪತ್ರೆಗಳಲ್ಲಿ ಒಪಿಡಿ ಆರಂಭಿಸಲು ಸೂಚನೆ: ಖಾಸಗಿ ಆಸ್ಪತ್ರೆಗಳ ನಿರ್ಲಕ್ಷ್ಯಕ್ಕೆ ಕ್ರಮದ ಎಚ್ಚರಿಕೆ – CHANNI

ಶಿವಮೊಗ್ಗ: ಕಾರ್ಮಿಕರ ಆರೋಗ್ಯ ಸುರಕ್ಷತೆ ಮತ್ತು ಇಎಸ್ಐಸಿ ಕಾರ್ಡ್‌ದಾರರ ಹಕ್ಕುಗಳ ರಕ್ಷಣೆಯಲ್ಲಿ ಯಾವುದೇ ಲೋಪ ಸಹಿಸುವುದಿಲ್ಲ ಎಂದು ಶಿವಮೊಗ್ಗ ಶಾಸಕ ಎಸ್.ಎನ್. ಚನ್ನಬಸಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಾಸಕರ ಕಚೇರಿಯಲ್ಲಿ ಇಎಸ್ಐಸಿ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯರು ಹಾಗೂ ಕಾರ್ಮಿಕ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಅವರು ಕಾರ್ಮಿಕರ ಆರೋಗ್ಯ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು.

ಇಎಸ್ಐ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಕಾರ್ಮಿಕರು ತೊಂದರೆ ಅನುಭವಿಸುತ್ತಿರುವ ವಿಚಾರವನ್ನು ಶಾಸಕರು ಗಂಭೀರವಾಗಿ ಪರಿಗಣಿಸಿದರು. ಕೂಡಲೇ ಒಪಿಡಿ ಸೇವೆಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಬೇಕು. ಇದಕ್ಕೆ ಅಗತ್ಯವಿರುವ ಹೆಚ್ಚುವರಿ ಕೊಠಡಿ ಮತ್ತು ಸ್ಥಳಾವಕಾಶವನ್ನು ತಕ್ಷಣ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಹುದ್ದೆಗಳು ಖಾಲಿ ಇರುವ ಕುರಿತು ಮಾಹಿತಿ ಪಡೆದ ಚನ್ನಬಸಪ್ಪ, ಈ ಕೊರತೆಯನ್ನು ಶೀಘ್ರದಲ್ಲಿ ಭರ್ತಿ ಮಾಡಬೇಕೆಂದು ಹೇಳಿದರು. ಈ ಸಂಬಂಧ ರಾಜ್ಯ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ತಕ್ಷಣ ವೈದ್ಯರನ್ನು ನಿಯೋಜಿಸಲು ಒತ್ತಾಯಿಸಿದರು.

ಇಎಸ್ಐಸಿ ಕಾರ್ಡ್‌ದಾರರಿಗೆ ನಗರದ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ತೋರಲಾಗುತ್ತಿದೆ ಎಂಬ ದೂರುಗಳನ್ನೂ ಸಭೆಯಲ್ಲಿ ಚರ್ಚಿಸಲಾಯಿತು. ಅಂತಹ ಆಸ್ಪತ್ರೆಗಳ ವಿರುದ್ಧ ಪರಿಶೀಲನೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ತುರ್ತು ಚಿಕಿತ್ಸೆ ಅಥವಾ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ತೆರಳಲು ಅಗತ್ಯವಿರುವ ಶಿಫಾರಸು ಪತ್ರ ನೀಡುವಲ್ಲಿ ವಿಳಂಬ ಮಾಡಬಾರದು. ಕಾರ್ಮಿಕರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ, ಜೀವರಕ್ಷಕ ಔಷಧಿ ಮತ್ತು ಗುಣಮಟ್ಟದ ವೈದ್ಯಕೀಯ ಸೇವೆ ಲಭ್ಯವಾಗಬೇಕು ಎಂದು ಅವರು ಸೂಚಿಸಿದರು.

ಪ್ರತಿಯೊಬ್ಬ ಇಎಸ್ಐಸಿ ಕಾರ್ಡ್‌ದಾರ ಕಾರ್ಮಿಕನಿಗೂ ಅಡೆತಡೆ ಇಲ್ಲದೆ ವೈದ್ಯಕೀಯ ಸೌಲಭ್ಯ ಸಿಗುವಂತೆ ಪೂರ್ಣ ಪ್ರಮಾಣದ ವ್ಯವಸ್ಥೆ ಮಾಡಬೇಕು. ಕಾರ್ಮಿಕರ ಆರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಚನ್ನಬಸಪ್ಪ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಇಎಸ್ಐಸಿ ಅಧಿಕಾರಿ ಬಸವನಗೌಡ, ಕಾರ್ಮಿಕ ಮುಖಂಡ ರಾಜು ಸಾಬ್, ಜಿಲ್ಲಾ ಮತ್ತು ತಾಲೂಕು ಮಟ್ಟದ ಕಾರ್ಮಿಕ ಅಧಿಕಾರಿಗಳು, ಇಎಸ್ಐಸಿ ವೈದ್ಯಾಧಿಕಾರಿಗಳು ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650