ಶಿವಮೊಗ್ಗ

ಶಿವಮೊಗ್ಗ:ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತರ ಪ್ರತಿಭಟನೆ

ಹೊಳೇಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂಪಿಸಿರುವ ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ. ಯೋಜನೆಯಿಂದ ಸಣ್ಣ ರೈತರ ಕೃಷಿ ಭೂಮಿಗೆ ಹಾನಿಯಾಗುವ ಆತಂಕ ವ್ಯಕ್ತಪಡಿಸಿ, ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಮನವಿ ಸಲ್ಲಿಸಲಾಗಿದೆ.

ಶಿವಮೊಗ್ಗ:ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತರ ಪ್ರತಿಭಟನೆ – holehonnuru town

ಶಿವಮೊಗ್ಗ: ಹೊಳೇಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂಪಿಸಿರುವ ‘ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್’ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿದೆ.

WhatsApp Group Join Now
Telegram Group Join Now
Instagram Group Join Now

ಯೋಜನೆಯಿಂದ ರೈತರ ಕೃಷಿ ಭೂಮಿಗೆ ಹಾನಿಯಾಗುವ ಆತಂಕ ವ್ಯಕ್ತಪಡಿಸಿರುವ ರೈತರು, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಅಧಿಕೃತ ಆಕ್ಷೇಪಣೆ ಮನವಿ ಸಲ್ಲಿಸಿದರು.

ಅಧಿಸೂಚನೆ ಹೊರಬಿದ್ದು ತಿಂಗಳು ಕಳೆದರೂ, ಯಾವ ಗ್ರಾಮದಲ್ಲಿ, ಯಾವ ಸರ್ವೇ ನಂಬರ್ ಮೂಲಕ ರಸ್ತೆ ಹಾದುಹೋಗಲಿದೆ ಎಂಬ ಸ್ಪಷ್ಟ ಮಾಹಿತಿಯನ್ನು ರೈತರಿಗೆ ನೀಡಲಾಗಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹಾಲಿ ಇರುವ ರಸ್ತೆ, ಕೆರೆ, ಗುಡ್ಡ, ಹಳ್ಳ-ಕೊಳ್ಳಗಳನ್ನು ಪರಿಗಣಿಸದೇ ಅವೈಜ್ಞಾನಿಕವಾಗಿ ರಸ್ತೆ ಯೋಜನೆ ರೂಪಿಸಲಾಗಿದೆ. ಇದರಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ತಮ್ಮ ಜೀವನಾಧಾರವಾದ ಕೃಷಿ ಭೂಮಿಯನ್ನು ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಬಹುದು ಎಂದು ರೈತರು ಕಳವಳ ವ್ಯಕ್ತಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಭೂಮಿ ಕಳೆದುಕೊಳ್ಳುವ ಪ್ರತಿಯೊಬ್ಬ ರೈತರಿಗೂ ನೋಟಿಸ್ ನೀಡಬೇಕು. ಅವರ ಅಭಿಪ್ರಾಯ ಪಡೆದು ನಂತರವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ.

ರೈತರ ಹಿತದೃಷ್ಟಿಯಿಂದ ಈ ಅವೈಜ್ಞಾನಿಕ ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ಅನ್ನು ತಕ್ಷಣ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650