SHIVAMOGGA | ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಲಾಗಿದೆ.
ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ ರೌಡಿಶೀಟರ್ ಭವಿತ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಲಾಗಿದೆ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
Gruhalakshmi June Installment : ಜೂನ್ ತಿಂಗಳ ಗೃಹಲಕ್ಷ್ಮಿ ಹಣ ನಿಮಗೆ ಇನ್ನೂ ಬಂದಿಲ್ಲವೇ ತಪ್ಪದೇ ಈ ಕೆಲಸಗಳನ್ನು ಮಾಡಿ
ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಮತ್ತು ಇತರೆ ಇಬ್ಬರು ಸಾರ್ವಜನಿಕರನ್ನು ಅಡ್ಡಗಟ್ಟಿ ಹಲ್ಲೆ ಮತ್ತು ಕೊಲೆಗೆ ಯತ್ನಿಸಿದ್ದಾರೆ. ಈ ಸಂಬಂಧ ಆರೋಪಿಗಳ ಹುಡುಕಾಟ ನಡೆಯುತಿತ್ತು. ರೌಡಿಶೀಟರ್ ಭವಿತ್ ಕುರಿತು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ತೆರಳಿದ್ದಾಗ ಆತ ಪೊಲೀಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ಪಿಎಸ್‌ಐ ಸುನಿಲ್ ಅವರು ಭವಿತ್ ಕಾಲಿಗೆ ಗುಂಡು ಹಾರಿಸಿದ್ದಾರೆ.

ಗಾಯಾಳು ಪೊಲೀಸ್ ಸಿಬ್ಬಂದಿ ಮತ್ತು ರೌಡಿಶೀಟರ್ ಭವಿತ್‌ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭವಿತ್ ವಿರುದ್ಧ ಕೊಲೆ ಪ್ರಕರಣ, ಕೊಲೆ ಯತ್ನ, ರಾಬರಿ ಸೇರಿ ಒಟ್ಟು ಏಳು ಪ್ರಕರಣಗಳಿವೆ. ವಿನೋಬಗರ ಠಾಣೆ ವ್ಯಾಪ್ತಿಯಲ್ಲಿ ಭವಿತ್ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ..
Farmer Loan Waiver :ರೈತರಿಗೆ ಗುಡ್ ನ್ಯೂಸ್ ನೀಡಿದ ರಾಜ್ಯ ಸರ್ಕಾರ, ಇಂತಹ ರೈತರ ಸಾಲ ಮನ್ನಾ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.