ಶಿವಮೊಗ್ಗ

ವಿಮಾನ ಟಿಕೆಟ್ ಬುಕಿಂಗ್ ನೆಪದಲ್ಲಿ ಉದ್ಯಮಿಗೆ ₹11.09 ಲಕ್ಷ ವಂಚನೆ; ಸಿಇಎನ್ ಠಾಣೆಯಲ್ಲಿ ಪ್ರಕರಣ

ವಿಮಾನ ಟಿಕೆಟ್ ಬುಕಿಂಗ್ ನೆಪದಲ್ಲಿ ಉದ್ಯಮಿಗೆ ₹11.09 ಲಕ್ಷ ವಂಚನೆ; ಸಿಇಎನ್ ಠಾಣೆಯಲ್ಲಿ ಪ್ರಕರಣ – flight ticket fraud

ಶಿವಮೊಗ್ಗ: ವಿಮಾನ ಟಿಕೆಟ್ ಬುಕಿಂಗ್ ಮಾಡಿಕೊಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಒಟ್ಟು ₹11.09 ಲಕ್ಷ ಹಣ ಪಡೆದು ವಂಚಿಸಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ಪ್ರೈವೇಟ್ ಲಿಮಿಟೆಡ್ ಕಂಪನಿಯ ಹೆಸರಿನಲ್ಲಿ ಸಂಪರ್ಕಿಸಿದ ವಂಚಕರು, ವಿಮಾನ ಟಿಕೆಟ್ ಬುಕಿಂಗ್ ಸೇವೆ ನೀಡುವುದಾಗಿ ಉದ್ಯಮಿಯನ್ನು ನಂಬಿಸಿದ್ದರು. ಈ ವೇಳೆ ಅವರ ವೈಯಕ್ತಿಕ ಮಾಹಿತಿಯನ್ನು ಪಡೆದುಕೊಂಡು, ರಿಜಿಸ್ಟ್ರೇಷನ್ ಶುಲ್ಕ ಸೇರಿದಂತೆ ವಿವಿಧ ಕಾರಣಗಳನ್ನು ಮುಂದಿಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಜೂನ್ 17ರಿಂದ ಜೂನ್ 20ರವರೆಗೆ ಉದ್ಯಮಿ, ಅವರ ಪತ್ನಿ ಹಾಗೂ ಪುತ್ರನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು ₹11,09,000 ಹಣ ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹಣ ಪಾವತಿಸಿದ ಬಳಿಕವೂ ವಿಮಾನ ಟಿಕೆಟ್ ನೀಡದೆ ವಂಚಕರು ಸಬೂಬು ಹೇಳುತ್ತಿದ್ದರು. ಉದ್ಯಮಿ ಹಣ ವಾಪಸ್ ನೀಡುವಂತೆ ಕೇಳಿದಾಗ, ಹೆಚ್ಚುವರಿ ಹಣ ಸೇರಿಸಿ ಹಿಂತಿರುಗಿಸುವುದಾಗಿ ಭರವಸೆ ನೀಡಿದ್ದರು. ಆದರೆ ನಂತರ ಹಣ ಮರಳಿಸದ ಹಿನ್ನೆಲೆಯಲ್ಲಿ ತಾವು ವಂಚನೆಗೆ ಒಳಗಾಗಿರುವುದು ಉದ್ಯಮಿಗೆ ತಿಳಿದುಬಂದಿದೆ.

ಈ ಕುರಿತು ನೀಡಲಾದ ದೂರಿನ ಆಧಾರದ ಮೇಲೆ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650