ಶಿವಮೊಗ್ಗ

ಗಾಜನೂರು ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ ಯಾವಾಗ?

ಶಿವಮೊಗ್ಗದ ಗಾಜನೂರಿನ ಪಿ.ಎಂ. ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಸಾಲಿನ 9ನೇ ಮತ್ತು 11ನೇ ತರಗತಿಗಳ ಖಾಲಿ ಸೀಟುಗಳಿಗೆ ಪ್ರವೇಶ ಪರೀಕ್ಷೆಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದ್ದು, ಪ್ರವೇಶ ಪರೀಕ್ಷೆ 2027ರ ಏಪ್ರಿಲ್ 10ರಂದು ನಡೆಯಲಿದೆ.

ಗಾಜನೂರು ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ ಯಾವಾಗ? – navodya

ಶಿವಮೊಗ್ಗ: ಗಾಜನೂರಿನ ಪಿ.ಎಂ. ಶ್ರೀ ಜವಾಹರ್ ನವೋದಯ ವಿದ್ಯಾಲಯದಲ್ಲಿ 2027-28ನೇ ಶೈಕ್ಷಣಿಕ ಸಾಲಿನ 9ನೇ ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ವಿದ್ಯಾಲಯದಲ್ಲಿ ಖಾಲಿ ಇರುವ ಸೀಟುಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಪ್ರವೇಶ ಪರೀಕ್ಷೆ ನಡೆಸಲಾಗುತ್ತಿದ್ದು, ಆಸಕ್ತ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ. ಪ್ರವೇಶ ಪರೀಕ್ಷೆ 2027ರ ಏಪ್ರಿಲ್ 10ರಂದು ನಡೆಯಲಿದೆ.

9ನೇ ತರಗತಿಗೆ ಅರ್ಜಿ ಸಲ್ಲಿಸಲು https://cbseitms.nic.in/2026/nvsix_9 ಲಿಂಕ್ ಬಳಸಬಹುದು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

11ನೇ ತರಗತಿಗೆ ಅರ್ಜಿ ಸಲ್ಲಿಸಲು https://cbseitms.nic.in/2026/nvsxi_11 ಲಿಂಕ್ ಬಳಸಬಹುದು.

ಹೆಚ್ಚಿನ ಮಾಹಿತಿಗಾಗಿ ಜವಾಹರ್ ನವೋದಯ ವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650