ಶಿವಮೊಗ್ಗ

ಶಿವಮೊಗ್ಗ : ಗಣೇಶ ಹಬ್ಬದ ಮೆರವಣಿಗೆ ವೇಳೆ ಡಿಜೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿಗೆ ನಿಷೇಧ

ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರ‍್ಯಾಲಿಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗ : ಗಣೇಶ ಹಬ್ಬದ ಮೆರವಣಿಗೆ ವೇಳೆ ಡಿಜೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಬೈಕ್ ರ‍್ಯಾಲಿಗೆ ನಿಷೇಧ – ganesha festival

ಶಿವಮೊಗ್ಗ: ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಪ್ರಮುಖ ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಸೆಪ್ಟೆಂಬರ್ 14ರಿಂದ ಅಕ್ಟೋಬರ್ 13ರವರೆಗೆ ಒಟ್ಟು 30 ದಿನಗಳ ಕಾಲ ಜಿಲ್ಲೆಯಲ್ಲಿ ಡಿಜೆ ಸಿಸ್ಟಂ ಬಳಕೆ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ಸಿಡಿಸುವುದು ಮತ್ತು ಬೈಕ್ ರ‍್ಯಾಲಿ ನಡೆಸುವುದನ್ನು ನಿಷೇಧಿಸಲಾಗಿದೆ.

ಸೆಪ್ಟೆಂಬರ್ 14ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ಆಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಹೆಚ್ಚಿನ ಶಬ್ದ, ಸಿಡಿಮದ್ದು, ವಾಹನ ರ‍್ಯಾಲಿ ಹಾಗೂ ಬ್ಲಾಸ್ಟಿಂಗ್‌ಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿಗಳು, ವಯೋವೃದ್ಧರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ಸಾಮಾನ್ಯ ನಾಗರಿಕರಿಗೆ ಅಡಚಣೆ ಉಂಟಾಗದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಅಧೀಕ್ಷಕರ ಶಿಫಾರಸಿನ ಮೇರೆಗೆ ಈ ಆದೇಶ ಹೊರಡಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಕರ್ನಾಟಕ ಪೊಲೀಸ್ ಕಾಯ್ದೆ-1963ರ ಕಲಂ 35 ಮತ್ತು 36ರಡಿ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಜಿಲ್ಲಾಧಿಕಾರಿಗಳು ಈ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕರು ನಿಯಮಗಳನ್ನು ಪಾಲಿಸಿ ಗಣೇಶ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650