ಗ್ರಾ.ಪಂ. ಅಧ್ಯಕ್ಷನ ಮನೆಯಲ್ಲಿ ಸಿಗ್ತು ಕಂತೆ ಕಂತೆ ಹಣ, ಚಿನ್ನಾಭರಣ !

Written by malnadtimes.com

Published on:

SHIVAMOGGA | ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾ.ಪಂ. ಅಧ್ಯಕ್ಷ ನಾಗೇಶ್.ಬಿ ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 (ತಿದ್ದುಪಡಿ ಕಾಯ್ದೆ-2018) ಅಡಿ ಪ್ರಕರಣ ದಾಖಲಾಗಿತ್ತು.

WhatsApp Group Join Now
Telegram Group Join Now
Instagram Group Join Now

Ripponpet | ವಾಡಿಕೆಗಿಂತ 76.9 ಮಿ‌.ಮೀ. ಮಳೆ ಹೆಚ್ಚಳ, ಕೃಷಿ ಚಟುವಟಿಕೆ ವಿಳಂಬ !

ಈತನ ವಿರುದ್ಧ ಅಕ್ರಮ ಆಸ್ತಿಗಳಿಸಿರುವ ಪ್ರಕರಣದ ತನಿಖೆ ಕೈಗೊಂಡ ಲೋಕಾಯುಕ್ತ ಪೊಲೀಸರು, ಇವರಿಗೆ ಸಂಬಂಧಿಸಿದ 5 ಸ್ಥಳಗಳಲ್ಲಿ ಜು.19 ರಂದು ಶಿವಮೊಗ್ಗ ಲೋಕಾಯುಕ್ತ ಅಧಿಕಾರಿಗಳು ಸ್ಥಳ ಶೋಧನೆ ಮಾಡಿದ್ದು, ನಾಗೇಶ್ ಬಿ. ರವರಿಗೆ ಸಂಬಂದಿಸಿದಂತೆ 2 ಖಾಲಿ ನಿವೇಶನಗಳು, 2 ಮನೆಗಳು, 5.14 ಎಕರೆ ಕೃಷಿ ಜಮೀನು , ಅಂದಾಜು 12.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳು, ಅಂದಾಜು 1.76 ಲಕ್ಷ ರೂ. ಮೌಲ್ಯದ ವಾಹನಗಳು, ಅಂದಾಜು 7 ಲಕ್ಷ ರೂ. ಮೌಲ್ಯದ ಗೃಹಪಯೋಗಿ ವಸ್ತುಗಳು ಮತ್ತು 5,71‌,640 ರೂ. ನಗದು ಹಣ ಪತ್ತೆಯಾಗಿದ್ದು ಅಂದಾಜು 1,33,87,826 ರೂ. ಮೌಲ್ಯದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಹಾಗೂ ಅವರ ಮನೆಯಲ್ಲಿ ಪತ್ತೆಯಾದ ನಗದು 5 ಲಕ್ಷ ರೂ. ಗಳನ್ನು ತನಿಖೆ ಸಂಬಂಧ ಅಮಾನತ್ತುಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಶಿವಮೊಗ್ಗದ ಪೊಲೀಸ್ ಅಧೀಕ್ಷಕರಾದ ಮಂಜುನಾಥ್ ಚೌದರಿ ಎಂ.ಹೆಚ್. ರವರು ದಾಖಲಿಸಿದ್ದು, ವೀರಬಸಪ್ಪ ಎಲ್ ಕುಸಲಾಪುರ ಪೊಲೀಸ್ ನಿರೀಕ್ಷಕರು, ಕ.ಲೋ ಶಿವಮೊಗ್ಗ ಇವರು ತನಿಖೆಯನ್ನು ಮುಂದುವರೆಸಿದ್ದಾರೆ.

ಈ ದಾಳಿ ಸಮಯಕ್ಕೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು, ಹಾಗೂ ಚಿತ್ರದುರ್ಗ, ಉಡುಪಿ ಮತ್ತು ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾಗಿರುತ್ತಾರೆ ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.

ಭಾರಿ ಮಳೆಗೆ ರಸ್ತೆ ಮಧ್ಯೆ ಬಿದ್ದ ಭಾರಿ ಪ್ರಮಾಣದ ಹೊಂಡ | ಮಿನಿ ಒಲಿಂಪಿಕ್ ಕಬ್ಬಡಿ ತಂಡಕ್ಕೆ ರಿಪ್ಪನ್‌ಪೇಟೆ ವಿದ್ಯಾರ್ಥಿಗಳು ಆಯ್ಕೆ

Leave a Comment