ಶಿವಮೊಗ್ಗ

ಶಿವಮೊಗ್ಗದಲ್ಲಿ ಹೋಟೆಲ್‌ಗಳ ಮೇಲೆ ದಿಢೀರ್ ತಪಾಸಣೆ:ಜ್ಯೂಸ್ ಸೆಂಟರ್ ಸೀಜ್

ಶಿವಮೊಗ್ಗದಲ್ಲಿ ಹೋಟೆಲ್‌ಗಳ ಮೇಲೆ ದಿಢೀರ್ ತಪಾಸಣೆ:ಜ್ಯೂಸ್ ಸೆಂಟರ್ ಸೀಜ್ – inspection tanu juicde

ಶಿವಮೊಗ್ಗ: ನಗರದಲ್ಲಿನ ಹೋಟೆಲ್‌ಗಳು ಮತ್ತು ಜ್ಯೂಸ್ ಸೆಂಟರ್‌ಗಳಲ್ಲಿ ಆಹಾರ ಗುಣಮಟ್ಟ, ಸ್ವಚ್ಛತೆ ಹಾಗೂ ಪರವಾನಗಿ ನಿಯಮಗಳ ಪಾಲನೆ ಪರಿಶೀಲಿಸಲು ಶಿವಮೊಗ್ಗ ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದಲ್ಲಿ ಮಂಗಳವಾರ ದಿಢೀರ್ ತಪಾಸಣೆ ನಡೆಸಲಾಗಿದೆ.

WhatsApp Group Join Now
Telegram Group Join Now
Instagram Group Join Now

ನಗರದ ದರ್ಗಾ ಕಾಂಪ್ಲೆಕ್ಸ್ ಸೇರಿದಂತೆ ವಿವಿಧ ವಾಣಿಜ್ಯ ಪ್ರದೇಶಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ, ಆಹಾರ ತಯಾರಿಸುವ ಸ್ಥಳಗಳ ಸ್ವಚ್ಛತೆ, ಬಳಸಲಾಗುತ್ತಿರುವ ಪದಾರ್ಥಗಳ ಗುಣಮಟ್ಟ, ಗ್ರಾಹಕರಿಗೆ ನೀಡಲಾಗುವ ಆಹಾರದ ಸುರಕ್ಷತೆ ಹಾಗೂ ಅಗತ್ಯ ಪರವಾನಗಿಗಳನ್ನು ಪರಿಶೀಲಿಸಿತು.

ತನು ಜ್ಯೂಸ್ ಸೆಂಟರ್‌ಗೆ ಬೀಗ

ತಪಾಸಣೆ ವೇಳೆ ನೈರ್ಮಲ್ಯ ಹಾಗೂ ನಿಯಮ ಪಾಲನೆಗೆ ಸಂಬಂಧಿಸಿದ ಗಂಭೀರ ಲೋಪಗಳು ಕಂಡುಬಂದ ಹಿನ್ನೆಲೆಯಲ್ಲಿ ತನು ಜ್ಯೂಸ್ ಸೆಂಟರ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ.

ಇತರ ಕೆಲವು ಹೋಟೆಲ್ ಮತ್ತು ಆಹಾರ ಮಳಿಗೆಗಳ ಮಾಲೀಕರಿಗೂ ಅಗತ್ಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಚ್ಚರಿಕೆ ನೀಡಲಾಗಿದೆ.

ಸಾರ್ವಜನಿಕರಿಗೆ ನೀಡುವ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯಲ್ಲಿ ನಿರ್ಲಕ್ಷ್ಯ ತೋರಬಾರದು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಡಾ. ಮೈತ್ರಿ ಸೂಚಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ನಗರದಲ್ಲಿ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಇಂತಹ ಅನಿರೀಕ್ಷಿತ ತಪಾಸಣೆಗಳನ್ನು ಮುಂದಿನ ದಿನಗಳಲ್ಲಿಯೂ ಮುಂದುವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650