ಶಿವಮೊಗ್ಗ

ಶಿವಮೊಗ್ಗದಲ್ಲಿ ಪತ್ರಕರ್ತನ ಮನೆಯಲ್ಲಿ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

ಶಿವಮೊಗ್ಗದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನಲ್ಲಿ ಹಿರಿಯ ಪತ್ರಕರ್ತ ಶಿ.ಜು.ಪಾಶಾ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕುಟುಂಬಸ್ಥರು ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ₹1.50 ಲಕ್ಷ ನಗದು ಸೇರಿ ಸುಮಾರು ₹6.57 ಲಕ್ಷ ಮೌಲ್ಯದ ಸ್ವತ್ತುಗಳನ್ನು ದೋಚಿದ್ದಾರೆ.

ಶಿವಮೊಗ್ಗದಲ್ಲಿ ಪತ್ರಕರ್ತನ ಮನೆಯಲ್ಲಿ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ – shiju pasha house theft

ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನಲ್ಲಿ ಹಿರಿಯ ಪತ್ರಕರ್ತ ಶಿ.ಜು.ಪಾಶಾ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣ ಕಳುವಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿ.ಜು.ಪಾಶಾ ಅವರು ಕುಟುಂಬ ಸಮೇತರಾಗಿ ತಮ್ಮ ತಂದೆಯ ಮನೆಯಲ್ಲಿ ಆಯೋಜಿಸಲಾಗಿದ್ದ ಕುರಾನ್ ಪಠಣ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕಾರ್ಯಕ್ರಮದ ಬಳಿಕ ಪಾಶಾ ಅವರು ತಮ್ಮ ಕಚೇರಿಗೆ ತೆರಳಿದ್ದರು. ಅವರ ಪತ್ನಿ ಸಂಜೆ ಸುಮಾರು 4 ಗಂಟೆಗೆ ಮನೆಗೆ ವಾಪಸ್ ಬಂದಾಗ ಮನೆಯ ಮುಖ್ಯ ಬಾಗಿಲಿನ ಬೀಗ ಮುರಿದಿರುವುದು ಗಮನಕ್ಕೆ ಬಂದಿದೆ.

ಒಳಗೆ ಹೋಗಿ ಪರಿಶೀಲಿಸಿದಾಗ ಬೆಡ್‌ರೂಮ್‌ನಲ್ಲಿದ್ದ ಬೀರು ಒಡೆದು, ಅದರಲ್ಲಿದ್ದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಮತ್ತು ನಗದು ಹಣ ಕಳುವಾಗಿರುವುದು ತಿಳಿದುಬಂದಿದೆ.

ದೂರಿನ ಪ್ರಕಾರ, 29 ಗ್ರಾಂ ತೂಕದ ನೆಕ್ಲೇಸ್, 15 ಗ್ರಾಂ ತೂಕದ ಹ್ಯಾಂಗಿಂಗ್ಸ್‌, 8 ಗ್ರಾಂ ತೂಕದ ಬ್ರೇಸ್‌ಲೆಟ್, 10 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು, 200 ಗ್ರಾಂ ತೂಕದ ಮೂರು ಜೊತೆ ಬೆಳ್ಳಿ ಕಾಲುಚೈನ್‌ಗಳು ಹಾಗೂ ₹1.50 ಲಕ್ಷ ನಗದು ಹಣ ಕಳವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಒಟ್ಟು ಸುಮಾರು ₹6.57 ಲಕ್ಷ ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳ್ಳರ ಪತ್ತೆಗೆ ತನಿಖೆ ಚುರುಕುಗೊಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650