ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಂ. ಎಂದು ಗುರುತಿಸಲಾಗಿದೆ. ಈ ಘಟನೆ ಬೆಳಗಿನ ಹೊತ್ತಿನಲ್ಲಿ ಬಸ್ ನಿಲ್ದಾಣದ ಶೌಚಾಲಯವನ್ನು ಸ್ವಚ್ಛಗೊಳಿಸಲು ಬಂದ ಸಿಬ್ಬಂದಿ ಕಂಡುಹಿಡಿದಿದ್ದಾರೆ.
ಮಾಹಿತಿಯ ಪ್ರಕಾರ, ಮರಿಸ್ವಾಮಿ ತಾನು ಧರಿಸಿದ್ದ ಪ್ಯಾಂಟ್ ಬಳಸಿ ಶೌಚಾಲಯದ ಕಿಟಕಿಗೆ ನೇಣು ಹಾಕಿಕೊಂಡಿದ್ದಾನೆ. ವಿಷಯ ತಿಳಿದು ದೊಡ್ಡಪೇಟೆ ಪೊಲೀಸ್ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

ಮೃತದೇಹವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ಕಾರಣ ಸ್ಪಷ್ಟವಾಗಿಲ್ಲ. ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

