ಶಿವಮೊಗ್ಗ:ಶಿವಮೊಗ್ಗದ ಪ್ರಮುಖ ವೈದ್ಯಕೀಯ ಸಂಸ್ಥೆಯಾದ ಮೆಡಿಕಲ್ ಕಾಲೇಜಿನಲ್ಲಿ ಮತ್ತೆ ಒಂದೇ ರೀತಿಯ ಗಂಭೀರ ಆರೋಪ ಕೇಳಿಬಂದಿದೆ. ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅಶ್ವಿನ್ ಹೆಬ್ಬಾರ್ ವಿರುದ್ಧ ಮತ್ತೊಮ್ಮೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ .
ಈ ಹಿಂದೆ ಕೂಡ ಡಾ. ಅಶ್ವಿನ್ ಹೆಬ್ಬಾರ್ ಲೈಂಗಿಕ ಕಿರುಕುಳ ಆರೋಪದ ಮೇಲೆ ಮೂರು ತಿಂಗಳು ಕಾಲ ಸಸ್ಪೆಂಡ್ ಆಗಿದ್ದರು., ಈಗ ಮತ್ತೊಮ್ಮೆ ಮತ್ತೊಬ್ಬ ವಿದ್ಯಾರ್ಥಿನಿಯಿಂದ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದೆ.
ದೂರು ದಾಖಲು :
ಸಂತ್ರಸ್ತೆಯು ಈ ಸಂಬಂಧ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಲ್ಲಿಸಿದ್ದಾಳೆ. ಪೊಲೀಸ್ ಇಲಾಖೆಯು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಪ್ರಾರಂಭಿಸಿದೆ. ಇನ್ನು ಕಾಲೇಜು ಆಡಳಿತ ಕೂಡ ಆಂತರಿಕ ತನಿಖೆ ನಡೆಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿದ್ಯಾರ್ಥಿಗಳ ಬೇಡಿಕೆ:ಈ ಘಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಕಾಲೇಜಿನ ಆಡಳಿತದಿಂದ ತ್ವರಿತ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ. “ವಿದ್ಯಾರ್ಥಿನಿಯರ ಸುರಕ್ಷತೆ ಎಂಬದನ್ನು ಆಡಳಿತ ಗಂಭೀರವಾಗಿ ತೆಗೆದುಕೊಳ್ಳಬೇಕು,” ಎಂದು ಕೆಲವು ವಿದ್ಯಾರ್ಥಿಗಳು ಪ್ರತಿಕ್ರಿಯಿಸಿದ್ದಾರೆ.
ಶಿವಮೊಗ್ಗ: ಎಣ್ಣೆ ಮತ್ತಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರ ದುರ್ಮರಣ