ಅಕ್ರಮ ಮರಳು ಸಾಗಾಟ ; ಎರಡು ಟಿಪ್ಪರ್ ಲಾರಿ ವಶಕ್ಕೆ, ಆರೋಪಿಗಳ ವಿರುದ್ಧ ಕೇಸ್ ದಾಖಲು

0 4,749

ಹೊಸನಗರ : ಹಿನ್ನೀರು ಪ್ರದೇಶದಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಪಡೆದು ಎರಡು ಪ್ರತ್ಯೇಕ ಪ್ರಕರಣಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ದಾಖಲಿಸಿದ್ದಾರೆ.

ಪರವಾನಿಗೆ ಇಲ್ಲದೆ ಟಿಪ್ಪರ್ ಲಾರಿಗಳಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳ ಸಹಿತ ಮರಳು ತುಂಬಿದ ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

ಸೊನಲೆ ಗ್ರಾಮದ ಕಿರಣ್ ಹಾಗೂ ಬಟ್ಟೆಮಲ್ಲಪ್ಪದ ದೇವರಾಜ ಎಂಬುವವರು ಕರಿನಗೊಳ್ಳಿ ಹಾಗೂ ಮುತ್ತಲ ಗ್ರಾಮಗಳಲ್ಲಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!