ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಓಮ್ನಿ ಕಾರು ; ನಾಲ್ವರಿಗೆ ಗಂಭೀರ ಗಾಯ
ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮ್ಮಿ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಓರ್ವನಿಗೆ ಗಂಭೀರ ಗಾಯವಾದ ಘಟನೆ ಗರ್ತಿಕೆರೆಯಲ್ಲಿ ನಡೆದಿದೆ.

ತೀರ್ಥಹಳ್ಳಿ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಸಾಗರ ಮೂಲದ ಒಂದೇ ಕುಟುಂಬದ ಐವರು ಪ್ರಯಾಣಿಸುತಿದ್ದರು.
ಈ ಘಟನೆಯಲ್ಲಿ ಎಲೋನ್ ಲೋಫಿಸ್ (52) ಎಂಬುವವರಿಗೆ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಎಲೋನ್ ಲೂಫಿಸ್ (48) ದೀಪ್ತಿ ಲೊಫಿಸ್ (43) ಮಾರ್ಗರೇಟ್ ಲೂಫಿಸ್ (43) ಎಂಬುವವರಿಗೂ ತೀವ್ರ ಸ್ವರೂಪದ ಗಾಯಗಳಾಗಿದ್ದು ನಾಲ್ವರನ್ನು ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಇನ್ನೊಬ್ಬ ಪ್ರಯಾಣಿಕ ರತೀಕ್(16) ಎಂಬಾತನಿಗೆ ಸಣ್ಣ-ಪುಟ್ಟ ಗಾಯಾಗಳಿಂದ ಪಾರಾಗಿದ್ದಾರೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.