ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ; ಸವಾರ ಸಾವು !
ರಿಪ್ಪನ್‌ಪೇಟೆ : ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಯನೂರು ಸಮೀಪದ ಚಿನ್ನಮನೆಯಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಸಮೀಪದ ಅರಸಾಳು ಗ್ರಾ.ಪಂ. ವ್ಯಾಪ್ತಿಯ ಹಾರೋಹಿತ್ತಲು ನಿವಾಸಿ ಗುರುಮೂರ್ತಿ (36) ಮೃತ ದುರ್ಧೈವಿಯಾಗಿದ್ದಾರೆ.
ಆಯನೂರು ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತ್ತಿದ್ದ ಬಜಾಜ್ ಡಿಸ್ಕವರ್ ಬೈಕ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಆಯನೂರು ಕಡೆಗೆ ತೆರಳುತಿದ್ದ ಖಾಸಗಿ ಬಸ್ (ಶ್ರೀ ದುರ್ಗಾಂಬಾ) ನಡುವೆ ಚಿನ್ನಮನೆ ಗ್ರಾಮದ ಕೆರೆ ಬಳಿಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.