ಭಾವೈಕ್ಯ ಸಂದೇಶ ನೀಡಿದ ಕೀರ್ತಿ ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳಿಗೆ ಸಲ್ಲುತ್ತದೆ ; ರಂಭಾಪುರಿ ಜಗದ್ಗುರುಗಳು

ತೀರ್ಥಹಳ್ಳಿ : ಎಲ್ಲರೂ ಅವರವರ ಧರ್ಮಕ್ಕೆ ಜಯವಾಗಲಿ ಎಂದರೆ ಲಿಂ.ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಭಾವೈಕ್ಯ ಸಂದೇಶ ನೀಡಿ ಜಗದ್ವಂದ್ಯರಾಗಿದ್ದಾರೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ತಾಲೂಕಿನ ಕವಲೇದುರ್ಗದ ಭುವನಗಿರಿ ಸಂಸ್ಥಾನ ಹಿರೇಮಠದಲ್ಲಿ ಜರುಗಿದ ಇಷ್ಟಲಿಂಗ ಮಹಾಪೂಜೆ, ಮಂಡಲ ಪೂಜೆಯ ಮುಕ್ತಾಯ, ನೂತನ ಕಟ್ಟಡ ಉದ್ಘಾಟನೆ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡುತ್ತಿದ್ದರು.

ಜಾತಿ ಮತ ಪಂಥಗಳೆನ್ನದೇ ಸರ್ವ ಸಮುದಾಯದ ಅಭ್ಯುದಯಕ್ಕಾಗಿ ಶ್ರಮಿಸಿದ ಕೀರ್ತಿ ಶ್ರೀ ಜಗದ್ಗುರು ರೇಣುಕಾದಿ ಪಂಚಾಚಾರ್ಯರಿಗೆ ಸಲ್ಲುತ್ತದೆ. ವಿಶ್ವ ಬಂಧುತ್ವದ ಆದರ್ಶ ಭಾವನೆಗಳನ್ನು ಹೊಂದಿ ಧರ್ಮ ಕಟ್ಟಿ ಬೆಳೆಸುವ ಜವಾಬ್ದಾರಿ ನಾಡಿನ ಮಠಗಳ ಮೇಲಿದೆ. ಉತ್ತಮ ಸಂಸ್ಕಾರ ಆದರ್ಶ ಚಿಂತನಗಳನ್ನು ಉಳಿಸಿ ಬೆಳೆಸಿದ್ದಾದರೆ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಎಲ್ಲ ಧರ್ಮಗಳ ಗುರಿ ಮಾನವ ಕಲ್ಯಾಣವೇ ಆಗಿದೆ ಎಂಬುದನ್ನು ಅರಿಯದೇ ಇಂದು ಧರ್ಮ ದೇವರ ಹೆಸರಿನಲ್ಲಿ ಏನೆಲ್ಲ ನಡೆಯುತ್ತಿವೆ. ಮನುಷ್ಯನ ಬುದ್ಧಿ ಶಕ್ತಿ ಬೆಳೆದಂತೆ ಭಾವನೆಗಳು ಬೆಳೆಯುತ್ತಿಲ್ಲ ಎಂಬುದು ನೋವಿನ ಸಂಗತಿಯಾಗಿದೆ.

ಪ್ರತಿಯೊಬ್ಬರಲ್ಲಿಯೂ ಸ್ವಾಭಿಮಾನದ ಜೊತೆಗೆ ದೇಶಾಭಿಮಾನ ಬೆಳೆದು ಬರಬೇಕು. ಕವಲೇದುರ್ಗದ ಮರುಳಸಿದ್ಧ ಶಿವಾಚಾರ್ಯ ಸ್ವಾಮಿಗಳು ಶ್ರೀ ಮಠದ ಅಧಿಕಾರ ವಹಿಸಿಕೊಂಡ ನಂತರ ಸತ್ಯ ಸಂಕಲ್ಪದೊಂದಿಗೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಿದ್ದಾರೆ. ನಾಡಿನ ಮಠಗಳಿಗೆ ಬೇಕಾಗುವ ಭಾವೀ ಮಠಾಧೀಶರಿಗೆ, ಜನ ಮನಕ್ಕೆ ಹತ್ತಿರವಾಗಿ ಕಾರ್ಯ ನಿರ್ವಹಿಸುವ ಶಾಸ್ತ್ರಿ ಬಳಗಕ್ಕೆ ತಮ್ಮ ಗುರುಕುಲದ ಮೂಲಕ ಶಿಕ್ಷಣ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕವಲೇದುರ್ಗ ಭುವನಗಿರಿ ಸಂಸ್ಥಾನ ಮಠ ಉತ್ತುಂಗಕ್ಕೆ ಏರುವುದರಲ್ಲಿ ಸಂಶಯವಿಲ್ಲ ಎಂದು ಹೇಳಿ ಶ್ರೀ ರಂಭಾಪುರಿ ಪೀಠದಿಂದ ಹಸಿರು ಮಡಿ, ಸ್ಮರಣಿಕೆಯನ್ನು ಕವಲೇದುರ್ಗ ಶ್ರೀಗಳಿಗೆ ನೀಡಿ ಆಶೀರ್ವದಿಸಿದರು.

ನೇತೃತ್ವ ವಹಿಸಿದ ಕವಲೇದುರ್ಗದ ಭುವನಗಿರಿ ಸಂಸ್ಥಾನ ಹಿರೇಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಮಾತನಾಡಿ ಗುರುವಿನ ಅಂತಃಕರಣದ ಆಶೀರ್ವಾದದಿಂದ ಏನೆಲ್ಲ ಸಾಧಿಸಲು ಸಾಧ್ಯವಾಗುತ್ತದೆ. ಕೃಷಿ ಜೀವನ ಋಷಿ ಜೀವನ ತತ್ವದಡಿಯಲ್ಲಿ ಇಲ್ಲಿನ ಗುರುಕುಲ ನಡೆಯುತ್ತಿದೆ. ಶ್ರೀ ರಂಭಾಪುರಿ ಜಗದ್ಗುರುಗಳ ಕೃಪಾಶೀರ್ವಾದದಿಂದ ಶ್ರೀ ಮಠ ಅಭಿವೃದ್ಧಿ ಹೊಂದುತ್ತದೆ. ಭವಿಷ್ಯತ್ತಿನ ದಿನಗಳಲ್ಲಿ ಶ್ರೀ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಸುವ ಸಂಕಲ್ಪ ತಮ್ಮದಾಗಿದೆ ಎಂದರು.

ಮಳಲಿಮಠದ ಡಾ.ನಾಗಭೂಷಣ ಶಿವಾಚಾರ್ಯ ಸ್ವಾಮಿಗಳು, ಕೋಣಂದೂರಿನ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಹರಪನಹಳ್ಳಿ ವರಸದ್ಯೋಜಾತ ಶಿವಾಚಾರ್ಯ ಸ್ವಾಮಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.


ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಲತಾ-ಕೆ.ಆರ್.ಪ್ರಕಾಶ ದಂಪತಿಗಳು, ಹಾಲಪ್ಪಗೌಡರು, ಗುರುಮೂರ್ತಿ ನಾಯಕ, ಪಾಂಡಣ್ಣ, ರಾಘವೇಂದ್ರ, ವಿಘ್ನೇಶ್ವರ ಸೊಲ್ಲಾಪುರಮಠ, ಪತ್ರಕರ್ತ ಪ್ರಶಾಂತ ರಿಪ್ಪನ್‌ಪೇಟೆ, ಯುವರಾಜಗೌಡ, ಸಿ.ಎಚ್.ಬಾಳನಗೌಡ್ರ, ವರ್ತೇಶಗೌಡ್ರು, ಪತ್ರಕರ್ತ ಬಸವರಾಜ ರಿಪ್ಪನ್‌ಪೇಟೆ ಸೇರಿದಂತೆ ಅನೇಕ ಗಣ್ಯರಿಗೆ ಶ್ರೀ ರಂಭಾಪುರಿ ಜಗದ್ಗುರುಗಳು ಗುರುರಕ್ಷೆ ನೀಡಿ ಆಶೀರ್ವದಿಸಿದರು.

ಸಮಾರಂಭಕ್ಕೂ ಮುನ್ನ ಶ್ರೀ ರಂಭಾಪುರಿ ಜಗದ್ಗುರುಗಳು ಇಷ್ಟಲಿಂಗ ಮಹಾಪೂಜಾ ನೆರವೇರಿಸಿ ಭಕ್ತ ಸಂಕುಲಕ್ಕೆ ಶುಭ ಹಾರೈಸಿದರು. ಆಗಮಿಸಿದ ಸಮಸ್ತರಿಗೂ ಅನ್ನ ದಾಸೋಹ ನೆರವೇರಿತು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago