ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

0 522

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ. ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ರಾತ್ರಿ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

Leave A Reply

Your email address will not be published.

error: Content is protected !!