ರಿಪ್ಪನ್‌ಪೇಟೆ ; ಗುಡ್ ಶೆಪರ್ಡ್ ಶಾಲೆ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ರಿಪ್ಪನ್‌ಪೇಟೆ : ಪಟ್ಟಣದ ಗುಡ್ ಶೆಪರ್ಡ್ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಬುಧವಾರ ನಡೆದ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಗ್ರಾಮೀಣ ಪ್ರದೇಶವಾದ ರಿಪ್ಪನ್‌ಪೇಟೆ ಪಟ್ಟಣದ ವಿದ್ಯಾರ್ಥಿಗಳ ಈ ಸಾಧನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ಶಿವಮೊಗ್ಗ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವ ಈ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ದೈಹಿಕ ಶಿಕ್ಷಣಾಧಿಕಾರಿ ಬಾಲಚಂದ್ರ ರಾವ್, ಗುಡ್ ಶೆಪರ್ಡ್ ಶಾಲೆಯ ಕಾರ್ಯದರ್ಶಿ ಹಾಗೂ ಧರ್ಮ ಗುರು ರೆ. ಫಾ. ಬಿನೋಯ್, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಜೋಸ್ಫಿನ್, ದೈಹಿಕ ಶಿಕ್ಷಕ ಬಿದರಹಳ್ಳಿ ಸುರೇಶ್, ಎಸ್ ಡಿ ಎಂಸಿ ಸದಸ್ಯರು, ಶಿಕ್ಷಕರು, ಪೋಷಕರು, ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Malnad Times

Recent Posts

Rain Alert | ಇಂದು ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಮತ್ತು ತುಮಕೂರು ಜಿಲ್ಲೆಗಳ ಕೆಲವೆಡೆ ಇಂದು ಹಗುರ ಮಳೆಯಾಗುವ…

4 hours ago

ಗೀತಾ ಶಿವರಾಜ್‌ಕುಮಾರ್ ರವರಿಗೆ ಒಂದು ಅವಕಾಶ ಕೊಡಿ ; ಸಾ.ರಾ. ಗೋವಿಂದು

ಶಿವಮೊಗ್ಗ: ಗೀತಾ ಶಿವರಾಜ್‌ಕುಮಾರ್ ಅವರಿಗೆ ಒಂದು ಅವಕಾಶವನ್ನು ನೀಡಬೇಕು ಎಂದು ಡಾ. ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ…

14 hours ago

ಗೀತಾ ಗ್ರಾ.ಪಂ. ಚುನಾವಣೆ ಕೂಡ ಗೆಲ್ಲಲ್ಲ ; ಕುಮಾರ್ ಬಂಗಾರಪ್ಪ

ಶಿವಮೊಗ್ಗ : ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

15 hours ago

ಮೇ 07 ರಂದು ಮತ ಚಲಾಯಿಸಲು ವೇತನ ಸಹಿತ ರಜೆ

ಶಿವಮೊಗ್ಗ : ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07…

17 hours ago

ವಕೀಲರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಚಿಕ್ಕಮಗಳೂರು: ಇಲ್ಲಿನ ವಕೀಲರ ಸಂಘದ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದು, ಅಧ್ಯಕ್ಷರಾಗಿ ಸುಜೇಂದ್ರ, ಉಪಾಧ್ಯಕ್ಷರಾಗಿ ಶರತ್‌ಚಂದ್ರ, ಕಾರ್ಯದರ್ಶಿ ಅನಿಲ್‌ಕುಮಾರ್, ಖಜಾಂಚಿ ದೀಪಕ್,…

17 hours ago

Chikkamagaluru | ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ

ಚಿಕ್ಕಮಗಳೂರು: ನಗರದ ತಮಿಳು ಕಾಲೋನಿಯ (ಸಂತೆ ಮೈದಾನ) ಶ್ರೀ ಕರುಮಾರಿಯಮ್ಮ ದೇವಾಲಯದಲ್ಲಿ ಮೇ 1 ರಿಂದ 5ರವರೆಗೆ ಕರಗ ಮಹೋತ್ಸವ…

17 hours ago