ಶಾಸಕರಿಂದಲೇ ಗ್ರಾಮಾಭಿವೃದ್ಧಿಗೆ ಅಡ್ಡಗಾಲು ; ಕಿಮ್ಮನೆ ರತ್ನಾಕರ್ ಗಂಭೀರ ಆರೋಪ


ಹೊಸನಗರ: ಕೋಟ್ಯಂತರ ರೂ. ಕಾರ್ಪೋರೇಟ್ ಕಂಪನಿಗಳ ಸಾಲವನ್ನು ಮನ್ನಾ ಮಾಡಲು ಹಿಂದೇಟು ಹಾಕದ ಬಿಜೆಪಿ ಸರಕಾರ ಗ್ರಾಮದ ಅಭಿವೃದ್ಧಿಗೆ ನೆಡುತೋಪು ಕಟಾವು ಮಾಡಿರುವುದರಲ್ಲಿ ಅಕ್ರಮ ನಡೆದಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದಾರೆ. ಕರಿಮನೆ ಗ್ರಾಮದ ಅಭಿವೃದ್ಧಿಗೆ ಸ್ವತಃ ಶಾಸಕ ಆರಗ ಜ್ಞಾನೇಂದ್ರರವರೆ ಅಡ್ಡಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಪಾದಿಸಿದರು.

ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://fb.watch/m_tCCDsNIk/?mibextid=NnVzG8


ಅವರು ಕರಿಮನೆಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ಕಾಂಗ್ರೆಸ್‌ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಕರಿಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಿಂದೆ ನಿರ್ಮಾಣ ಮಾಡಿದ್ದ ಅಕೇಶಿಯಾ ನೆಡುತೋಪು ಕಡಿತಲೆ ವಿಷಯದಲ್ಲಿ ಶಾಸಕ ಆರಗ ಜ್ಞಾನೇಂದ್ರ ಅವರು ಅನಗತ್ಯ ವಿವಾದ ಹುಟ್ಟು ಹಾಕುತ್ತಿದ್ದಾರೆ. ಗ್ರಾಮ ಪಂಚಾಯಿತಿಯೇ ಹಿಂದೆ ಅನುದಾನ ನೀಡಿ ನೆಡುತೋಪು ನಿರ್ಮಿಸಿತ್ತು. ಇಷ್ಟು ವರ್ಷಗಳ ಕಾಲ ನಿರ್ವಹಣೆ ಮಾಡಲಾಗಿತ್ತು. ಇದಕ್ಕೆ ಪೂರಕ ದಾಖಲೆಗಳಿವೆ. ಆದರೆ ಈಗ ಕಡಿತಲೆ ವಿಚಾರವನ್ನು ವಿವಾದವನ್ನಾಗಿ ಮಾಡಲಾಗಿದೆ. ಗ್ರಾಮದ ಅಭಿವೃದ್ಧಿಗೆ ಹಣ ಸಿಗಬಾರದು, ಇದರಿಂದ ಆಡಳಿತಾರೂಢ ಕಾಂಗ್ರೆಸ್ ಸದಸ್ಯರಿಗೆ ಗ್ರಾಮಸ್ಥರಲ್ಲಿ ಅಸಮಧಾನ ಮೂಡಬೇಕು ಎನ್ನುವ ಉದ್ದೇಶದಿಂದ ಪ್ರತಿಭಟನೆ ನಡೆಸಿ, ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಲು ಒತ್ತಡ ಹೇರುತ್ತಿದ್ದಾರೆ ಎಂದು ದೂರಿದರು.


ವಾಸ್ತವದಲ್ಲಿ 2021ರಲ್ಲಿ ಇವರು ಗೃಹ ಸಚಿವರಾಗಿದ್ದ ವೇಳೆ ಸ್ವತಃ ಇವರೇ ಮರ ಕಡಿತಲೆಗೆ ಅವಕಾಶ ನೀಡುವಂತೆ ಇಲಾಖೆಗೆ ಪತ್ರ ಬರೆದಿದ್ದರು. ಈಗ ಇವರೇ ಇದನ್ನು ವಿರೋಧಿಸ ತೊಡಗಿರುವುದು ಕೇವಲ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಎನ್ನುವುದು ಸ್ಪಷ್ಟವಾಗಿದೆ. ಒಂದು ವೇಳೆ ಕೇಸು ದಾಖಲಿಸುವುದಾದರೆ ಶಾಸಕರ ವಿರುದ್ಧವೇ ದಾಖಲು ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಗ್ರಾಮ ಪಂಚಾಯಿತಿ ನಿರ್ವಹಣೆ ಮಾಡಿದ ನೆಡುತೋಪು ಕಡಿತಲೆ ಮಾಡಿ ಊರಿನ ಅಭಿವೃದ್ಧಿ ಅನುದಾನ ಬಳಸಿಕೊಳ್ಳಲು, ಕಾನೂನಿನ ಅಡಿಯಲ್ಲಿಯೇ ಅವಕಾಶವಿದೆ. ಕೇಂದ್ರದ ಬಿಜೆಪಿ ಸರಕಾರ ರಾಜ್ಯಕ್ಕೆ ನೀಡಬೇಕಾದ ಲಕ್ಷಾಂತರ ಕೋಟಿ ರೂ. ತೆರಿಗೆ ಸಂಗ್ರಹ ಹಣವನ್ನು ನೀಡಿಲ್ಲ. ಗ್ರಾಮಗಳ ಅಭಿವೃದ್ಧಿಗೆ ಯಾವುದೇ ಅನುದಾನ ಹರಿದುಬರುತ್ತಿಲ್ಲ. ಗ್ರಾಮದ ಸಂಪನ್ಮೂಲಗಳ ಬಳಕೆಗೆ ಈ ರೀತಿಯಲ್ಲಿ ಅಡ್ಡಿ ತರುವುದು ಎಷ್ಟು ಸಮಂಜಸ ? ಎಂದು ಅವರು ಪ್ರಶ್ನಿಸಿದರು.


ಒಂದು ವೇಳೆ ಅಧಿಕಾರಿಗಳು ಅಥವಾ ಪಂಚಾಯಿತಿ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇ ಆದಲ್ಲಿ ತಾವು ಪಂಚಾಯಿತಿ ಆವರಣದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇನೆ. ಲಕ್ಷಾಂತರ ಮೌಲ್ಯದ ಹಣವನ್ನು ಲಪಟಾಯಿಸಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಬೆಂಬಲಿತ ಸದಸ್ಯರ ಮೇಲೆ ಆರೋಪ ಮಾಡಿದ್ದಾರೆ. ಅಷ್ಟು ಅನುಮಾನವಿದ್ದರೇ, ಇವರೇ ಕಡಿತಲೆ ಮಾಡಿ ಹಣವನ್ನು ಪಂಚಾಯಿತಿಗೆ ನೀಡಲಿ ಎಂದು ಸವಾಲು ಹಾಕಿದರು.


ಸೀರೆ ಹಂಚುವುದು ಅಭಿವೃದ್ಧಿಯೇ ?
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಯಕ್ರಮಗಳನ್ನು ಬಿಜೆಪಿ ವಿರೋಧಿಸುತ್ತಿದೆ. ಇದರಿಂದ ಬಡವರ ವಿರೋಧಿ ಬಿಜೆಪಿ ಎನ್ನುವುದು ತಿಳಿಯಬಹುದು. ಈಗ ಹಬ್ಬದ ನೆಪದಲ್ಲಿ ತೀರ್ಥಹಳ್ಳಿಯಲ್ಲಿ ಸಾವಿರಾರು ಮಹಿಳೆಯರಿಗೆ ಶಾಸಕರು ಸೀರೆ ಹಂಚಿದ್ದಾರೆ. ಇದು ಅಭಿವೃದ್ದಿ ಕಾರ್ಯವೇ, ಇದಕ್ಕೆ ಹಣ ಎಲ್ಲಿಂದ ಬಂತು ಎನ್ನುವುದನ್ನು ಬಹಿರಂಗ ಪಡಿಸಬೇಕು ಎಂದು ಅವರು ಆಗ್ರಹಿಸಿದರು.


ಗ್ರಾಪಂ ಅಧ್ಯಕ್ಷೆ ದೇವಮ್ಮ ಗೋಪಾಲ್, ಉಪಾಧ್ಯಕ್ಷ ರಮೇಶ್ ಹಲಸಿನಹಳ್ಳಿ, ಪ್ರಮುಖರಾದ ಕರುಣಾಕರ ಶೆಟ್ಟಿ, ಸತೀಶ್ ಪಟೇಲ್, ಪ್ರಕಾಶ್ ಮಳಲಿ, ನಾಗರತ್ನ ದೇವೇಂದ್ರ ಜಿ.ಎಚ್., ಹರೀಶ್, ಪರ್ವತಪ್ಪಗೌಡ ಮತ್ತಿತರರು ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago