ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ಪರಿಸರ ರಕ್ಷಣೆಯ ಪಾಠ ಅಗತ್ಯ

ರಿಪ್ಪನ್‌ಪೇಟೆ: ಬುದ್ದಿವಂತನಲ್ಲ ಎಂದು ಮಕ್ಕಳನ್ನು ತೆಗಳದೆ ಅವನ್ನ ಕ್ರಿಯಾಶಕ್ತಿಯನ್ನಾದರಿಸಿ ಪ್ರೋತ್ಸಾಹಿಸಿದಲ್ಲಿ ಎಲ್ಲರಿಗಿಂತ ಮೊದಲ ಸ್ಥಾನದಲ್ಲಿರುತ್ತಾರೆ. ವಿದ್ಯಾರ್ಥಿ ವ್ಯಾಸಂಗದಲ್ಲಿ ಹಿಂದೆ ಉಳಿದಿದ್ದಾನೆಂದು ಪೇಲ್ ಆದರೂ ಚಿಂತಿಸದೇ ಅವರಿಗೆ ಹೆಚ್ಚು ಪ್ರೋತ್ಸಾಹಿಸಿದಲ್ಲಿ ಹೆಚ್ಚು ಸಾಧನೆ ಮಾಡುವ ಮೂಲಕ ಮೊದಲ ವ್ಯಕ್ತಿಯಾಗುತ್ತಾನೆ. ಮಕ್ಕಳಿಗೆ ಹೇಳಿ, ಗಾಂಧಿ ಬುದ್ದ ಬಸವಣ್ಣ ಇನ್ನಿತರ ಆದರ್ಶನಾಯಕರಂತಾಗಿ ಎಂದು ಹೇಳಬೇಡಿ ತಂದೆ-ತಾಯಿಯಂತಾಗಬೇಕು ಎಂದು ಹೇಳಿ ಎಂದು ಕಬಳೆ ಸಂತ ಫ್ರಾನ್ಸಿಸ್ ಕ್ಸೇಮಿಯರ್ ಧರ್ಮ ಕೇಂದ್ರದ ರೆವೆರಂಟ್ ಫಾದರ್ ರೋಮನ್ ಪಿಂಟೋ ಹೇಳಿದರು.

ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ “ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಮನಷ್ಯನ ದುರಾಸೆಯಿಂದಾಗಿ ನಮ್ಮ ಪರಿಸರ ವಿನಾಶದ ಅಂಚಿಗೆ ತಲುಪುವಂತಾಗಿದೆ. ಅಭಿವೃಧ್ಧಿಯ ಹೆಸರಿನಲ್ಲಿ ನಮ್ಮ ಪೂರ್ವಜರು ನೆಟ್ಟು ಬೆಳೆಸಲಾದ ಬೃಹತ್ ಗಾತ್ರದ ಮರಗಳನ್ನು ಕಡಿಯುತ್ತಿದ್ದಾರೆ. ಆದರೆ ಅದರ ಬದಲು ಒಂದು ಗಿಡವನ್ನು ಬೆಳಸುವ ಬಗ್ಗೆ ಚಿಂತಿಸುತ್ತಿಲ್ಲಾ ಇದು ಹೀಗೆ ಮುಂದುವರಿದರೆ ಮುಂದಿನ ಪೀಳಿಗಗೆ ಆಕ್ಸಿಜನ್ ಸಮಸ್ಯೆ ಎದುರಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ವಿಷಾದ ವ್ಯಕ್ತಪಡಿಸಿ, ನಮ್ಮ ಮಕ್ಕಳು ತಮ್ಮ ಶಾಲಾ ಅವರಣದಲ್ಲಿ ತಲಾ ಒಂದೊಂದು ಗಿಡ ಬೆಳಸಿ ಪರಿಸರದ ರಕ್ಷಣೆ ಮಾಡುವಂತಾಗಬೇಕು ಎಂದರು.

ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕ ರೆವೆರಂಟ್ ಫಾದರ್ ಬಿನೋಯಿ ಮ್ಯಾಥ್ಯೂ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಗ್ರಾಮ ಪಂಚಾಯ್ತಿ ಆಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಉದ್ಘಾಟಿಸಿದರು.
ಮುಖ್ಯಅತಿಥಿಗಳಾಗಿ ಆರಾಧನ ಸೊಸೈಟಿ ಮದರ್ ಸುಪೀರಿಯರ್ ಸಿಸ್ಟರ್ ಲೀಸಾ ಮರಿಯಾ, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾಮ ಪಂಚಾಯ್ತಿ ಸದಸ್ಯರಾದ ಮಹಾಲಕ್ಷ್ಮಿ,ವನಮಾಲ, ಶಿಕ್ಷಣ ಸಂಯೋಜಕ ಕರಿಬಸಪ್ಪ, ದುಗ್ಗಪ್ಪ, ಸಮೂಹ ಸಂಪನ್ಮೂಲ ವ್ಯಕ್ತಿ ಎನ್.ಮಂಜುನಾಥ, ಸಬಾಸ್ಟಿನ್‌ಮ್ಯಾಥ್ಯೂ, ಮುಖ್ಯ ಶಿಕ್ಷಕಿ ಸಿಸ್ಟರ್ ಜೋಸ್ಫಿನ್, ಎಎಸ್‌ಐ ಹಾಲಪ್ಪ, ಎಸ್.ಡಿ.ಎಂ.ಸಿ. ಅಧ್ಯಕ್ಷ ಹಸನಬ್ಬ, ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಬ್ಲೆಸ್ಸಿನ್, ಜಯಲಕ್ಷ್ಮಿ, ರೇಖಾ, ಷಾಜಿ, ದಯಾನಂದ, ರಾಘವೇಂದ್ರ ಇನ್ನಿತರರು ಪಾಲ್ಗೊಂಡಿದ್ದರು.

ವಿದ್ಯಾರ್ಥಿಗಳಿಂದ ಪ್ರಾರ್ಥನೆ. ಸಹಶಿಕ್ಷಕ ರಾಘವೇಂದ್ರ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಸಿಸ್ಟರ್ ಜೋಸ್ಫಿನ್ ವಾರ್ಷಿಕ ವರದಿ ವಾಚನ ಮಾಡಿದರು. ಮಂಜುನಾಥ ವಂದಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago