Accident | ಮರಕ್ಕೆ ಗುದ್ದಿ ಮೂರು ಪಲ್ಟಿಯಾದ ಜೀಪ್, ಚಾಲಕ ಸ್ಥಳದಲ್ಲೇ ಸಾವು !

0 1,270

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಮಧ್ಯಾಹ್ನ 2:30ರ ಸುಮಾರಿಗೆ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ಶೆಟ್ಟಿಕೆರೆ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.

ಘಟನೆಯಲ್ಲಿ ರಿಪ್ಪನ್‌ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ರಸ್ತೆಗೆ ಕಾಡು ಪ್ರಾಣಿ ಅಡ್ಡ ಬಂದ ಹಿನ್ನೆಲೆಯಲ್ಲಿ ಈ ಅಪಘಾತವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave A Reply

Your email address will not be published.

error: Content is protected !!