ರಿಪ್ಪನ್ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಜೀಪೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಇಂದು ಮಧ್ಯಾಹ್ನ 2:30ರ ಸುಮಾರಿಗೆ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ಶೆಟ್ಟಿಕೆರೆ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಜೀಪ್ ಮರಕ್ಕೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.
ಘಟನೆಯಲ್ಲಿ ರಿಪ್ಪನ್ಪೇಟೆ ಸಮೀಪದ ತಳಲೆ ನಿವಾಸಿ ಪ್ರಭೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಜೀಪ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮೃತದೇಹವನ್ನು ಹೊರತೆಗೆಯಲು ಹರಸಾಹಸ ಪಡಲಾಯಿತು. ರಸ್ತೆಗೆ ಕಾಡು ಪ್ರಾಣಿ ಅಡ್ಡ ಬಂದ ಹಿನ್ನೆಲೆಯಲ್ಲಿ ಈ ಅಪಘಾತವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮೃತದೇಹವನ್ನು ರಿಪ್ಪನ್ಪೇಟೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಿ ಮರಣೋತ್ತರ ಪರೀಕ್ಷೆಗೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.
ಸ್ಥಳಕ್ಕೆ ರಿಪ್ಪನ್ಪೇಟೆ ಪಿಎಸ್ಐ ನಿಂಗರಾಜ್ ಕೆ ವೈ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…