ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಇಬ್ಬರು ಸಾವು !

0 0

ಭದ್ರಾವತಿ: ತಾಲೂಕಿನ ಜಾವಳ್ಳಿ ಬಳಿ 2 ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.


ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್ ಬಾಷಾ (35), ಅಫ್ತಾಬ್ ತಂಗಿ ಮಗಳು ಮದಿಯಾ ಮಿನಲ್ (12) ಮೃತರು. ಇನ್ನುಳಿದಂತೆ ಕಾರಿನಲ್ಲಿದ್ದ 6 ಜನರಿಗೆ ಸಣ್ಣ-ಪುಟ್ಟ ಗಾಯಗಳಾದರೆ, ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಸಿ.ಪಿ.ಐ. ಲಕ್ಷ್ಮಿಪತಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,
ಈ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!