ಅಪ್ರಾಪ್ತ ಪುತ್ರನಿಗೆ ಬೈಕ್‌ ಓಡಿಸಲು ಅವಕಾಶ ನೀಡಿದ ತಂದೆಗೆ ₹ 25 ಸಾವಿರ ದಂಡ !

0 34

ಭದ್ರಾವತಿ : ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್‌ ಓಡಿಸಲು ಅವಕಾಶ ನೀಡಿದ ತಂದೆಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ.

ಪಟ್ಟಣದ ಜನ್ನಾಪುರದ ನಿವಾಸಿ ಶ್ರೀಕಾಂತ್ (45) ತಮ್ಮ 16 ವರ್ಷದ ಪುತ್ರನಿಗೆ ಬೈಕ್‌ ಚಾಲನೆಗೆ ಅವಕಾಶ ನೀಡಿ ದಂಡ ಹಾಕಿಸಿಕೊಂಡ ತಂದೆ ಎಂದು ಗುರುತಿಸಲಾಗಿದೆ.

ಪ್ರಕರಣದ ಹಿನ್ನೆಲೆ:

ಜುಲೈ 19 ರಂದು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೋನಿ ಬಳಿ, ಸಬ್ ಇನ್ಸ್‌ಪೆಕ್ಟರ್ ರಮೇಶ್ ವಾಹನ ತಪಾಸಣಾ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಬಾಲಕನೋರ್ವ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದು, ಆತನನ್ನು ನಿಲ್ಲಿಸಿ ವಾಹನಗಳ ದಾಖಲಾತಿ ಪರಿಶೀಲಿಸಿದ್ದರು.

ಆತನ ಬಳಿ ವಾಹನ ಚಾಲನಾ ಪರವಾನಿಗೆಯಿಲ್ಲದಿರುವುದು ಹಾಗೂ ಅಪ್ರಾಪ್ತ ವಯಸ್ಸಿನವನಾಗಿರುವುದು ಬೆಳಕಿಗೆ ಬಂದಿತ್ತು. ಸಂಚಾರಿ ನಿಯಮಗಳಿಗೆ ವಿರುದ್ಧವಾಗಿ, ಅಪ್ರಾಪ್ತ ಪುತ್ರನಿಗೆ ಬೈಕ್‌ ಚಾಲನೆ ಮಾಡಲು ಅವಕಾಶ ನೀಡಿದ ತಂದೆಯ ವಿರುದ್ದ ನ್ಯೂ ಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ತದನಂತರ ಪ್ರಕರಣದ ಕುರಿತಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.

Leave A Reply

Your email address will not be published.

error: Content is protected !!