ಭದ್ರಾವತಿ : ಅಪ್ರಾಪ್ತ ವಯಸ್ಸಿನ ಪುತ್ರನಿಗೆ ಬೈಕ್ ಓಡಿಸಲು ಅವಕಾಶ ನೀಡಿದ ತಂದೆಗೆ ಭದ್ರಾವತಿ ಜೆ.ಎಂ.ಎಫ್.ಸಿ ನ್ಯಾಯಾಲಯ 25 ಸಾವಿರ ರೂ. ದಂಡ ವಿಧಿಸಿದೆ.
ಪಟ್ಟಣದ ಜನ್ನಾಪುರದ ನಿವಾಸಿ ಶ್ರೀಕಾಂತ್ (45) ತಮ್ಮ 16 ವರ್ಷದ ಪುತ್ರನಿಗೆ ಬೈಕ್ ಚಾಲನೆಗೆ ಅವಕಾಶ ನೀಡಿ ದಂಡ ಹಾಕಿಸಿಕೊಂಡ ತಂದೆ ಎಂದು ಗುರುತಿಸಲಾಗಿದೆ.
ಪ್ರಕರಣದ ಹಿನ್ನೆಲೆ:
ಜುಲೈ 19 ರಂದು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯ ಹುತ್ತಾ ಕಾಲೋನಿ ಬಳಿ, ಸಬ್ ಇನ್ಸ್ಪೆಕ್ಟರ್ ರಮೇಶ್ ವಾಹನ ತಪಾಸಣಾ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಬಾಲಕನೋರ್ವ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದು, ಆತನನ್ನು ನಿಲ್ಲಿಸಿ ವಾಹನಗಳ ದಾಖಲಾತಿ ಪರಿಶೀಲಿಸಿದ್ದರು.
ಆತನ ಬಳಿ ವಾಹನ ಚಾಲನಾ ಪರವಾನಿಗೆಯಿಲ್ಲದಿರುವುದು ಹಾಗೂ ಅಪ್ರಾಪ್ತ ವಯಸ್ಸಿನವನಾಗಿರುವುದು ಬೆಳಕಿಗೆ ಬಂದಿತ್ತು. ಸಂಚಾರಿ ನಿಯಮಗಳಿಗೆ ವಿರುದ್ಧವಾಗಿ, ಅಪ್ರಾಪ್ತ ಪುತ್ರನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ತಂದೆಯ ವಿರುದ್ದ ನ್ಯೂ ಟೌನ್ ಠಾಣೆಯಲ್ಲಿ ಲಘು ಪ್ರಕರಣ ದಾಖಲಿಸಲಾಗಿತ್ತು. ತದನಂತರ ಪ್ರಕರಣದ ಕುರಿತಂತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…