ದುಷ್ಕರ್ಮಿಗಳಿಂದ ಗಾಂಧಿ ಪ್ರತಿಮೆ ಧ್ವಂಸ ; ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ

0 41

ಭದ್ರಾವತಿ : ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಯನ್ನ ದುಷ್ಕರ್ಮಿಗಳು ಧ್ವಂಸ ಮಾಡಿರುವ ಘಟನೆ ತಾಲೂಕಿನ ಹೊಳೆಹೊನ್ನೂರು ಪಟ್ಟಣದಲ್ಲಿ ನಡೆದಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿರುವ ಈ ಪ್ರತಿಮೆಯನ್ನು ಕಳೆದ ರಾತ್ರಿ ಕಿಡಿಗೇಡಿಗಳು ದುಷ್ಕೃತ್ಯ ನಡೆಸಿರುವ ಶಂಕೆ ಇದ್ದು ದುಷ್ಕೃತ್ಯದ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹೊಳೆಹೊನ್ನೂರು ಪೊಲೀಸರು ಪರಿಶೀಲನೆ ನಡೆಸಿದರು.

ಅಷ್ಟೊತ್ತಿಗಾಗಲೇ ಧ್ವಂಸಗೊಂಡ ಪ್ರತಿಮೆ ಸುತ್ತ ಸಾರ್ವಜನಿಕರು ಜಮಾಯಿಸಿದ್ದು ದುಷ್ಕರ್ಮಿಗಳನ್ನು ಬಂಧಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಸಂಚಾರ ವ್ಯವಸ್ಥೆ ಕೆಲಕಾಲ ಅಸ್ತವ್ಯಸ್ತಗೊಂಡಿತು. ಸದ್ಯ ಘಟನೆ ಸಂಬಂಧ ಪೊಲೀಸರು ಸುತ್ತಮುತ್ತಲಿರುವ ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.

error: Content is protected !!