ಸರ್.ಎಂ.ವಿ. ಕಾಲೇಜಿನಲ್ಲಿ ನಡೆದ ಒಂದು ದಿನದ ಕಾರ್ಯಾಗಾರ

0 36

ಭದ್ರಾವತಿ: ಸರ್.ಎಂ.ವಿ. ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು, ಭದ್ರಾವತಿ, ಉದ್ಯೋಗ ಭರವಸಾ ಕೋಶ, ಎನ್.ಎಸ್.ಎಸ್ ಘಟಕ 1 ಮತ್ತು 2 ಹಾಗೂ ಐ.ಕ್ಯೂ.ಎ.ಸಿ ಯ ಸಹಯೋಗದಲ್ಲಿ ಸೋಮವಾರದಂದು ಒಂದು ದಿನದ ಕಾರ್ಯಗಾರವನ್ನು “Employability Skills and Competitive Examination” ಎಂಬ ವಿಷಯವನ್ನಾದರಿಸಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಿನ್ಸಿಪಾಲರಾದ ಡಾ. ಶೈಲಜಾ ಎಸ್. ಹೊಸಳ್ಳೇರ ರವರು ವಹಿಸಿದ್ದು ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಾಮುಖ್ಯತೆಯನ್ನು ನೆರೆದವರಲ್ಲಿ ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ನಾಗರಾಜ್ ಕೋಣನೂರು ರವರು ಕಾರ್ಯಾಗಾರವನ್ನು ನಡೆಸಿಕೊಟ್ಟರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ಹಂತದಿಂದ ಪರೀಕ್ಷೆಗಳಲ್ಲಿ ಯಶಸ್ವಿಯಾಗಿ ತೇರ್ಗಡೆಹೊಂದುವ ವಿಷಯಗಳನ್ನು ವಿದ್ಯಾರ್ಥಿಗಳಲ್ಲಿ ಹಂಚಿಕೊಂಡರು.

ಕಾರ್ಯಕ್ರಮದ ಆಯೋಜಕರಾದ ಕಾಲೇಜಿನ ಉದ್ಯೋಗ ಭರವಸಾ ಕೋಶದ ಸಂಚಾಲಕ ಚಿರಂಜೀವಿ ವಿ.ಬಿ. ರವರು ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕವರ್ಗದವರು ಹಾಗೂ ಬೋಧಕೇತರ ವರ್ಗದವರು, ಅಂತಿಮ ವರ್ಷದ ಬಿ.ಎ., ಬಿ.ಕಾಂ, ಬಿಬಿಎ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನೆರೆದ ಸರ್ವರನ್ನೂ ಎನ್.ಎಸ್.ಎಸ್ ಘಟಕ 2 ರ ಕಾರ್ಯಕ್ರಮಾಧಿಕಾರಿ ಗುರುಪ್ರಸಾದ್‌ ಬಿ. ರವರು ಸರ್ವರನ್ನೂ ಸ್ವಾಗತಿಸಿದರು. ಎನ್.ಎಸ್.ಎಸ್ ಘಟಕ 1ರ ಕಾರ್ಯಕ್ರಮಾಧಿಕಾರಿ ಡಾ. ಟಿ.ಜಿ. ಉಮಾ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರನ್ನೂ ವಂದಿಸಿದರು. ಅಂತಿಮ ಬಿ.ಕಾಂ. ವಿದ್ಯಾರ್ಥಿನಿ ಕು|| ಐಶ್ವರ್ಯ ಹೆಚ್.ಜೆ. ರವರು ಪ್ರಾರ್ಥಿಸಿದರು ಹಾಗೂ ಕಾರ್ಯಕ್ರಮವನ್ನು ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ.ಜಿ. ರವರು ನಿರೂಪಿಸಿದರು.

Leave A Reply

Your email address will not be published.

error: Content is protected !!