ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ ; ಬೇಳೂರು ಗೋಪಾಲಕೃಷ್ಣ

0 125

ಹೊಸನಗರ : ಪಠ್ಯ ಚಟುವಟಿಕೆಯಷ್ಟೇ ಪಠ್ಯೇತರ ಚಟುವಟಿಕೆಗಳಿಗೂ ಪ್ರಾಮುಖ್ಯತೆ ಇದೆ. ಅದರಲ್ಲೂ ಕ್ರೀಡಾ ಚಟುವಟಿಕೆ ಪ್ರಮುಖವಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವಿಕೆ ಮುಖ್ಯ. ಮಲೆನಾಡಿನಲ್ಲಿ ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉತ್ತಮ ಸಾಧನೆಯನ್ನು ಪ್ರಕಟಿಸುತ್ತಿರುವುದು ಸ್ವಾಗತವಾಗಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಅಭಿಮತ ವ್ಯಕ್ತಪಡಿಸಿದರು.

ಅವರು ಇಂದು ಪಟ್ಟಣದ ನೆಹರು ಮೈದಾನದಲ್ಲಿ 2023-24ನೇ ಸಾಲಿನ 17 ವರ್ಷ ವಯೋಮಿತಿ ಒಳಗಿನ ಪ್ರೌಢಶಾಲಾ ಬಾಲಕ, ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ಈ ಮೈದಾನದಲ್ಲಿ ಪ್ರತಿ ವರ್ಷ ಕ್ರೀಡಾಕೂಟಗಳು ನಡೆಯುತ್ತಿದ್ದರು ಬಾಲಕಿಯರಿಗಾಗಲಿ ಬಾಲಕರಿಗಾಗಲಿ ಶೌಚಾಲಯದ ವ್ಯವಸ್ಥೆ ಇಲ್ಲದ ಬಗ್ಗೆ ಆತಂಕ ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ಕ್ರೀಡಾಂಗಣ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಚೇರಿ, ಹೋಲಿ ರೆಡಿಮರ್ ಸಂಯುಕ್ತ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಆಶ್ರಯದಲ್ಲಿ ನಡೆದ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಹೋಲಿ ರೆಡಿಮರ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸಿಸ್ಟರ್ ಐರಿನ್ ಡಿಸಿಲ್ವಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಯುವ ಮುಂದಾಳು ಮಾಸ್ತಿಕಟ್ಟೆ ಸುಬ್ರಮಣ್ಯ, ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಓಂಕೇಶ್, ಸದಸ್ಯ ಕಾಲಸಸಿ ಸತೀಶ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಕೆ ಬಾಲಚಂದ್ರ ರಾವ್, ಕರಿಬಸಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್ ಆರ್ ಕೃಷ್ಣಮೂರ್ತಿ ಮೊದಲಾದವರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Leave A Reply

Your email address will not be published.

error: Content is protected !!