ನಾಳೆ ಹೊಸನಗರಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಮನ

0 8


ಹೊಸನಗರ: ಜುಲೈ 15 ರಂದು ಶನಿವಾರ ಅಪರಾಹ್ನ 3 ಗಂಟೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೊಸನಗರಕ್ಕೆ ಆಗಮಿಸಲಿದ್ದಾರೆ.


ಸಂಜೆ 4 ಗಂಟೆಗೆ ಪಟ್ಟಣ ಪಂಚಾಯತಿಯ ಆವರಣದಲ್ಲಿ ಪಟ್ಟಣ ಪಂಚಾಯತಿ ಸದಸ್ಯರು, ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿರುವ ಬೇಳೂರು ಗೋಪಾಲಕೃಷ್ಣ ಹಾಗೂ ನೂತನ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಸನ್ಮಾನ ಕಾರ್ಯಕ್ರಮ ನಂತರ ಶಾಸಕರ ಕೊಠಡಿಗೆ ಭೇಟಿ ಕಾರ್ಯಕರ್ತರೊಂದಿಗೆ ಚರ್ಚೆ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ, ನಂತರ ತಾಲ್ಲೂಕು ಪಂಚಾಯತಿಯ ಆವರಣದಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜುರವರು ತಿಳಿಸಿದ್ದಾರೆ.

Leave A Reply

Your email address will not be published.

error: Content is protected !!