ಬಾಳೆಬರೆ ಘಾಟ್ ವಾಹನ ಸಂಚಾರ ಪುನರಾರಂಭ

0 0

ಹೊಸನಗರ : ಕರಾವಳಿ ಹಾಗೂ ಮಲೆನಾಡನ್ನು ಬೆಸೆಯುವ ಬಾಳೆಬರೆ (ಹುಲಿಕಲ್‌) ಘಾಟಿಯ ಕಾಂಕ್ರಿಟೀಕರಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಶನಿವಾರ ರಾತ್ರಿಯಿಂದ ವಾಹನ ಸಂಚಾರ ಮತ್ತೆ ಆರಂಭಗೊಂಡಿದೆ.

ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ, ಚರಂಡಿ ಮತ್ತಿತರ ಕಾಮಗಾರಿಗಳಾಗಿ ಫೆ. 5ರಿಂದ ಏ. 5ರ ವರೆಗೆ ಈ ಘಾಟಿಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದರು. ಆ ಬಳಿಕ ಏ. 5ರಂದು ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ 10 ದಿನಗಳ ವರೆಗೆ ಸಂಚಾರ ನಿಷೇಧಿಸಲಾಗಿತ್ತು. ಈಗ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

3.5 ಕಿ.ಮೀ. ಕಾಮಗಾರಿ
ಕುಂದಾಪುರ – ತೀರ್ಥಹಳ್ಳಿ ರಾಜ್ಯ ಹೆದ್ದಾರಿ ಹಾದುಹೋಗುವ ಬಾಳೆಬರೆ ಘಾಟಿಯ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಂದಾಜು 1 ಕಿ.ಮೀ. ಹಾಗೂ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ 2.5 ಕಿ.ಮೀ. ಸೇರಿದಂತೆ ಒಟ್ಟು 3.5 ಕಿ.ಮೀ. ದೂರದವರೆಗೆ ರಸ್ತೆ ಅಗಲ, ಕಾಂಕ್ರಿಟೀಕರಣ, ರಕ್ಷಣೆಯ ತಡೆಗೋಡೆ ನಿರ್ಮಾಣ ಕಾರ್ಯ ನಡೆದಿದೆ.

3.5 ಕಿ.ಮೀ. ಅಭಿವೃದ್ಧಿ ಬಾಕಿ
ಬಾಳೆಬರೆ ಘಾಟಿಯು ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆ ಸೇರಿ ಹುಲಿಕಲ್‌ ಚೆಕ್‌ ಪೋಸ್ಟ್‌ನಿಂದ ಹೊಸಂಗಡಿಯ ಘಾಟಿಯ ಬುಡದ ವರೆಗೆ 14.5 ಕಿ.ಮೀ. ದೂರವಿದೆ. ಶಿವಮೊಗ್ಗ ಜಿಲ್ಲೆಯ 8 ಕಿ.ಮೀ. ಪೈಕಿ ಈ ಹಿಂದೆ ಸ್ವಲ್ಪ ಕಾಂಕ್ರಿಟೀಕರಣ ಆಗಿದ್ದು, ಈಗ ಬಾಕಿಯಿದ್ದ 2.5 ಕಿ.ಮೀ.ನೊಂದಿಗೆ ಕಾಂಕ್ರಿಟೀಕರಣಗೊಂಡಿದೆ. ಉಡುಪಿ ಜಿಲ್ಲೆಯ 6.5 ಕಿ.ಮೀ. ಘಾಟಿಯ ಪೈಕಿ ಈ ಹಿಂದೆ 2 ಕಿ.ಮೀ., ಈಗ 1 ಕಿ.ಮೀ. ಸೇರಿದಂತೆ ಒಟ್ಟು 3 ಕಿ.ಮೀ. ಕಾಂಕ್ರಿಟೀಕರಣಗೊಂಡಂತಾಗಿದೆ. ಇನ್ನು ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ 3.5 ಕಿ.ಮೀ. ಘಾಟಿ ರಸ್ತೆ ಕಾಂಕ್ರಿಟೀಕರಣ ಬಾಕಿ ಇದೆ.

Leave A Reply

Your email address will not be published.

error: Content is protected !!