ಮೂಲೆಗದ್ದೆ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ

0 0

ರಿಪ್ಪನ್‌ಪೇಟೆ: ಮೇ 10 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.


ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಅಭಿವೃದ್ದಿ ಎಂಬುದು ಮರೀಚಿಕೆಯಾಗಿದೆ ಕಾಗೋಡು ತಿಮ್ಮಪ್ಪನವರು ಮಾಡಿದಂತಹ ಅಭಿವೃದ್ದಿ ಕಾರ್ಯಗಳನ್ನು ನಾನು ಮಾಡಿದ್ದು ಎಂದು ಹೇಳಿಕೊಂಡು ಮತದಾರರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು ಹಾಲಪ್ಪನವರ ಸುಳ್ಳು ಭರವಸೆಗೆ ಮರಳಾಗದೇ ಈ ಬಾರಿ ಕಾಂಗ್ರೆಸ್ ಪಕ್ಷದ ಕಡೆಗೆ ಮತದಾರರು ಹೆಚ್ಚು ಒಲವು ವ್ಯಕ್ತಪಡಿಸುತ್ತಿದ್ದು ರಾಜ್ಯದಲ್ಲಿ 140 ಸ್ಥಾನ ಮತ್ತು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ 7 ಕ್ಷೇತ್ರದಲ್ಲಿ ಜಯಭೇರಿ ಸಾಧಿಸಲಿದ್ದು ಈ ಬಾರಿ ರಾಜ್ಯದ ಅಧಿಕಾರದ ಚುಕ್ಕಾಣಿ ಕಾಂಗ್ರೆಸ್‌ನದಾಗಿದೆ ಎಂದರು.


ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಯಶೀಲಪ್ಪಗೌಡ ಹರತಾಳು, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಹಾರೋಹಿತ್ತಲು, ಜಿ.ಪಂ.ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್, ತಾ.ಪಂ.ಮಾಜಿ ಸದಸ್ಯ ಬಿ.ಜಿ.ಚಂದ್ರಮೌಳಿಗೌಡ, ಎರಗಿ ಉಮೇಶ್, ತುರಗೋಡು ನಾಗರಾಜ್, ಸಣ್ಣಕ್ಕಿ ಮಂಜು, ಪಕ್ಷದ ಮುಖಂಡರು ಹಾಜರಿದ್ದರು.

Leave A Reply

Your email address will not be published.

error: Content is protected !!