ಹೊಸನಗರ ; ಟ್ಯಾಂಕರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ – ಇಬ್ಬರು ಸವಾರರ ಕಾಲಿಗೆ ಗಂಭೀರ ಗಾಯ !

0 45

ಹೊಸನಗರ : ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತ್ತಿದ್ದ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಲಾರಿ ಮತ್ತು ಹೊಸನಗರದಿಂದ ಸುತ್ತ – ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ ಫೀಲ್ಡ್ ಬುಲೆಟ್ ಬೈಕ್ ನಡುವೆ ತಡರಾತ್ರಿ ಎಂಟು ಗಂಟೆ ಸುಮಾರಿಗೆ ಇಲ್ಲಿನ ಕೆಇಬಿ ಸರ್ಕಲ್ ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ನಲ್ಲಿದ್ದ ತೆಂಕಬೈಲ್ ಲೋಕಪ್ಪಗೌಡ ಹಾಗೂ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ಸವಾರರ ಕಾಲುಗಳು ಜಖಂ ಗೊಂಡಿರುವುದಾಗಿ ತಿಳಿದುಬಂದಿದೆ.

ಗಾಯಾಳುಗಳಿಗೆ ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave A Reply

Your email address will not be published.

error: Content is protected !!