ಹೊಸನಗರ ; ನೂತನ ತಹಶೀಲ್ದಾರ್ ನೇಮಕ
ಹೊಸನಗರ : ನೂತನ ತಹಶೀಲ್ದಾರ್ ಆಗಿ ಕೆ ಪುರಂದರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆ. ಪುರಂದರ ಅವರು ಪ್ರಸ್ತುತ ಹೆಬ್ರಿ ತಾಲೂಕಿನ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತಿದ್ದರು. ಅವರನ್ನು ಹೊಸನಗರ ತಹಶೀಲ್ದಾರ್ ವಿ.ಎಸ್ ರಾಜೀವ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ನಿಯುಕ್ತಿಗೊಳಿಸಲಾಗಿದೆ.

ಹೊಸನಗರ ತಾಲೂಕಿನ ತಹಶೀಲ್ದಾರ್ ರಾಜೀವ್ ರವರನ್ನು ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಕೆ. ಪುರಂದರ ಅವರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.