ಹೊಸನಗರ ಪ.ಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್‌ನಿಂದ ಗ್ಯಾರಂಟಿ ಕಾರ್ಡ್ ವಿತರಣೆ

0 1


ಹೊಸನಗರ: ಕರ್ನಾಟಕ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ಆಧಾರದ ಮೇಲೆ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ ಉಚಿತ 10 ಕೆ.ಜಿ ಅಕ್ಕಿ, 200 ಯೂನಿಟ್ ಉಚಿತ ವಿದ್ಯುತ್ ಹಾಗೂ ಕುಟುಂಬದ ಹೆಣ್ಣು ಮಗಳಿಗೆ ಪ್ರತಿ ತಿಂಗಳು 2 ಸಾವಿರ ಹಣ ನೀಡುವ ಗ್ಯಾರಂಟಿ ಕಾರ್ಡ್‌ ಅನ್ನು ರಾಜ್ಯದಲ್ಲಿ ಮನೆ-ಮನೆಗೆ ತುಪಿಸುವ ಕಾರ್ಯಕ್ರಮ ನಡೆಯುತ್ತಿದ್ದು ಅದರಂತೆ ಹೊಸನಗರದಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಅಧ್ಯಕ್ಷರಾದ ಬಿ.ಜಿ.ನಾಗರಾಜ್‌ರವರ ನೇತೃತ್ವದಲ್ಲಿ ಮನೆ-ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್ ವಿತರಿಸುವ ಕಾರ್ಯಕ್ರಮದ ಜೊತೆಗೆ ಮುಂದಿನ ವಿಧಾನಸಭೆಯ ಚುನಾವಣೆಯ ಪ್ರಚಾರವನ್ನು ನಡೆಸಿದರು.


ಈ ಗ್ಯಾರಂಟಿ ಕಾರ್ಡ್ ವಿತರಿಸುವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಗೋಪಾಲ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!