ಅಡುಗೆ ಕೋಣೆಯಲ್ಲಿ ನೇಣಿಗೆ ಶರಣಾದ ಗೃಹಿಣಿ !

0 1,998

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ಮನೆಯೊಂದರಲ್ಲಿ ಗೃಹಿಣಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಡೆದಿದೆ.

ಕವನಾ (24) ಆತ್ಮಹತ್ಯೆಗೆ ಶರಣಾ ಗೃಹಿಣಿ. ತೀರ್ಥಹಳ್ಳಿ ರಸ್ತೆಯ ಸ್ವಸ್ತಿಕ್ ಚಿತ್ರಮಂದಿರದ ಮುಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕೊಳವಳ್ಳಿ ಮೂಲದ ಕವನ ಪಟ್ಟಣದ ಖಾಸಗಿ ಶಾಪಿಂಗ್ ಮಾಲ್ ಒಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಕಳೆದ ಆರು ವರ್ಷಗಳ ಹಿಂದೆ ಶಿಕಾರಿಪುರದ ರುದ್ರೇಶ್ ಎಂಬುವವರನ್ನು ವಿವಾಹವಾಗಿದ್ದ ಕವನರಿಗೆ ಐದು ವರ್ಷದ ಮಗನಿದ್ದು ಈತ ಅಜ್ಜಿಯ ಮನೆಯಲ್ಲಿದ್ದಾನೆ ಎಂದು ತಿಳಿದುಬಂದಿದೆ.

ಮಂಗಳವಾರ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ನಿನ್ನೆಯಿಂದ ಫೋನ್ ಕರೆ ಸ್ವೀಕರಿಸದ ಹಿನ್ನಲೆಯಲ್ಲಿ ಅವರ ಸ್ನೇಹಿತೆಯರು ಇಂದು ಮನೆಯ ಬಳಿ ನೋಡಲು ಹೋದಾಗ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ತೆರಳಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave A Reply

Your email address will not be published.

error: Content is protected !!