ಹೊಸನಗರ: ತಾಲ್ಲೂಕಿನ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಳ್ಳಂಡ ಗ್ರಾಮದ ಹಾಲಪ್ಪ ಗೌಡ ಬಿನ್ ರುದ್ರಪ್ಪ ಗೌಡರಿಗೆ ಸೇರಿದ ಒಣ ಹುಲ್ಲಿನ ಬಣಬೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಪಕ್ಕದಲ್ಲಿದ್ದ ಕೊಟ್ಟಿಗೆಗೂ ಬೆಂಕಿ ಹೊತ್ತಿದ ಘಟನೆ ಇಂದು ಮಧ್ಯಾಹ್ನ ಸಂಭವಿಸಿದ್ದು ಸುಮಾರು ಅಂದಾಜು 50 ಸಾವಿರ ರೂಪಾಯಿಯಷ್ಟು ನಷ್ಟವಾಗಿದೆ.
ಆಗ್ನಿ ಶಾಮಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಗ್ರಾಮ ಪಂಚಾಯತಿಯ ಸಿಬ್ಬಂದಿಯಾದ ಧರ್ಮಪ್ಪ, ಚಂದ್ರಶೇಖರ್, ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಕೌಶಿಕ್ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲಿಸಿ ಆನಾಹುತವಾದ ಬಗ್ಗೆ ಕಂದಾಯ ಇಲಾಖೆಗೆ ವರದಿ ಸಲ್ಲಿಸಿ ಸರ್ಕಾರದಿಂದ ಸಿಗುವ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…