ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ; ಮಹಿಳೆ ಕಾಲು ಮುರಿತ

ರಿಪ್ಪನ್‌ಪೇಟೆ : ಕಾರು ಹಾಗೂ ಸ್ಕೂಟಿ ನಡುವೆ ಭೀಕರ ಅಪಘಾತವಾಗಿ ಸ್ಕೂಟಿಯಲ್ಲಿದ್ದ ಮಹಿಳೆಯ ಕಾಲು ಮುರಿತವಾದ ಘಟನೆ ಗವಟೂರಿನಲ್ಲಿ ಇಂದು ನಡೆದಿದೆ.

ಹೊಸನಗರ ಕಡೆಯಿಂದ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಹಾಗೂ ಹಳಿಯೂರು ರಸ್ತೆಯಿಂದ ಮುಖ್ಯ ರಸ್ತೆಗೆ ಬಂದ ಸ್ಕೂಟಿಗೆ ಡಿಕ್ಕಿಯಾಗಿದೆ.

ಬೈಕಿನಲ್ಲಿ ದೊಡ್ಡಿನಕೊಪ್ಪ ಗ್ರಾಮದ ಚಂದ್ರಬಾಬು ಮತ್ತು ಲಕ್ಷ್ಮಿ ದಂಪತಿಗಳು ಪ್ರಯಾಣಿಸುತ್ತಿದ್ದು ಘಟನೆಯಲ್ಲಿ ಲಕ್ಷ್ಮಿ ರವರ ಬಲಗಾಲು ಮುರಿತವಾಗಿದೆ.

ತಕ್ಷಣ ಸ್ಥಳೀಯರು ಗಾಯಾಳುವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಮತ್ತು ಸ್ಕೂಟಿ ನಜ್ಜುಗುಜ್ಜಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ‌.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago