ಕೃಷಿ ವಿವಿ ವಿದ್ಯಾರ್ಥಿಗಳಿಂದ ಅಣಬೆ ಕೃಷಿ ಪ್ರಾತ್ಯಕ್ಷಿಕೆ

ರಿಪ್ಪನ್‌ಪೇಟೆ : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಸಿಹಿಜೇನಿ ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ ಚಿಕ್ಕಜೇನಿ ಗ್ರಾಮದಲ್ಲಿ ಅಣಬೆ ಕೃಷಿಯ ಬಗ್ಗೆ ವಿಧಾನ ಪ್ರಾತ್ಯಕ್ಷಿಕೆಯನ್ನು ಹಾಗೂ ಗುಂಪು ಚರ್ಚೆಯನ್ನು ನಡೆಸಿದರು.

ಈ ಕಾರ್ಯಕ್ರಮದಲ್ಲಿ ಸಂಕ್ಷಿಪ್ತವಾಗಿ ಅಣಬೆಯ ಬಗ್ಗೆ ಅಣಬೆಯಲ್ಲಿರುವ ಪೋಷಕಾಂಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ವಿಧಾನ ಪ್ರಾತ್ಯಕ್ಷಿಕೆಯಲ್ಲಿ ರೈತರು ಮನೆಯಲ್ಲಿಯೇ ಸುಲಭವಾಗಿ ಅಣಬೆ ಬೆಳೆಸಲು ಬೇಕಾದ ಸಾಮಗ್ರಿಗಳ ಬಗ್ಗೆ ತಿಳಿಸಿದರು.

ಮೊದಲು ಭತ್ತದ ಹುಲ್ಲನ್ನು 1 ಇಂಚಿನಷ್ಟು ಉದ್ದಕ್ಕೆ ಕತ್ತರಿಸಬೇಕು ನಂತರ ಅದನ್ನು ನೀರಿನಲ್ಲಿ 12 ಗಂಟೆಗಳ ಕಾಲ ನೆನೆಸಬೇಕು ಹಾಗೂ 1 ಗಂಟೆಯ ಕಾಲ ಬೇಯಿಸಿ ನೆರಳಿನಲ್ಲಿ ಒಣಗಿಸಿ ನಂತರ ಭತ್ತದ ಹುಲ್ಲು ತುಂಬಿದ ಪಾಲಿಥೀನ್ ಕವರ್ ಗಳಲ್ಲಿ ಅಣಬೆ ಬೀಜಗಳನ್ನು ಹಂತ ಹಂತವಾಗಿ ಹಾಕಬೇಕೆಂದು ಅಣಬೆ ಬೆಳೆಯುವ ವಿಧಾನವನ್ನು ಹೇಳಿಕೊಡಲಾಯಿತು.

ಆಸಕ್ತ ರೈತರು ಅದರ ಬಗ್ಗೆ ಹಲವಾರು ಪ್ರಶ್ನೆಗಳನ್ನು ಕೇಳಿ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಂಡರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago