ಕ್ರೀಡಾಕೂಟ ; ಜಿಲ್ಲಾ ಮಟ್ಟಕ್ಕೆ ಆಯ್ಕೆ

0 135

ಹೊಸನಗರ: ತಾಲೂಕಿನ ರಿಪ್ಪನ್‌ಪೇಟೆಯಲ್ಲಿ ಶನಿವಾರ ನಡೆದ 14 ವರ್ಷ ವಯೋಮಿತಿಯ ತಾಲೂಕು ಮಟ್ಟದ ಕ್ರೀಡಾಕೂಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮೇಲಿನಬೆಸಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ವಿಭಾಗದಲ್ಲಿ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಕ್ರೀಡಾಪಟುಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಾಲಾ ಅಭಿವೃದ್ಧಿ ಸಮಿತಿಯವರು, ಗ್ರಾಮಸ್ಥರು ಅಭಿನಂದಿಸಿ ಶುಭಕೋರಿದ್ದಾರೆ.

ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಮಕ್ಕಳ ಸಾಧನೆಯನ್ನು ಪ್ರಶಂಸಿಸಿ ಜಿಲ್ಲಾ ಮಟ್ಟದಲ್ಲೂ ಉತ್ತಮ ಸಾಧನೆ ಮಾಡಿ ರಾಜ್ಯ ಮಟ್ಟದಲ್ಲಿ ಕೀರ್ತಿ ಪತಾಕೆ ಹಾರಿಸಬೇಕೆಂದು ಹಾರೈಸಿದ್ದಾರೆ.

Leave A Reply

Your email address will not be published.

error: Content is protected !!