Categories: Hosanagara News

ಗೊಂದಲದ ಗೂಡಾದ ಮೆಸ್ಕಾಂ ಜನಸಂಪರ್ಕ ಸಭೆ ;ವಿದ್ಯುತ್ ಕಣ್ಣಾಮುಚ್ಚಾಲೆ ತಪ್ಪಿಸುವಂತೆ ಗ್ರಾಹಕರ ಆಗ್ರಹ


ಹೊಸನಗರ : ತಾಲೂಕಿನಲ್ಲಿ ಕೆಲವು ತಿಂಗಳಿನಿಂದ ವಿದ್ಯುತ್ ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ. ವಿದ್ಯುತ್ ಸರಬರಾಜಿನಲ್ಲಿ ಇರುವ ತೊಂದರೆಗಳನ್ನು ಮೆಸ್ಕಾಂ ಇಲಾಖೆ ಬೇಗನೆ ಸರಿಪಡಿಸಿಕೊಂಡು ಗುಣಮಟ್ಟದ ವಿದ್ಯುತ್ ಸರಬರಾಜಿಗೆ ಮುಂದಾಗಬೇಕೆಂದು ಗ್ರಾಹಕರು ಒಕ್ಕೊರಲಿನಿಂದ ಆಗ್ರಹಿಸಿದರು.


ಪಟ್ಟಣದ ಮೆಸ್ಕಾಂ ಕಚೇರಿನಲ್ಲಿ ಹಮ್ಮಿಕೊಂಡಿದ್ದ ಜನಸಂಪರ್ಕ ಸಭೆಯಲ್ಲಿ ಗ್ರಾಹಕರು ಮಾತನಾಡಿ, ಕೂಡಲೇ ಹರಿದ್ರಾವತಿ ಗ್ರಾಮದಲ್ಲಿ 110 ಕೆವಿ ವಿದ್ಯುತ್ ಘಟಕ ನಿರ್ಮಾಣಕ್ಕೆ ಮೆಸ್ಕಾಂ ಅಗತ್ಯ ಕ್ರಮಕೈಗೊಳ್ಳಬೇಕು. ತಾಲೂಕಿನ ವಿದ್ಯುತ್ ಕಣ್ಣಾಮುಚ್ಚಾಲೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮರಗಳ ಕಟಾವು ಸೇರಿದಂತೆ ಟವರ್ ಲೈನ್ ನಿರ್ಮಾಣಕ್ಕೆ ಕೇಂದ್ರ ಪರಿಸರ ಇಲಾಖೆ ಅನುಮತಿ ಪಡೆಯುಲು ಅಧಿಕಾರಿಗಳು ಸಂಸದರ ಗಮನ ಸೆಳೆಯುವಂತಾಗಬೇಕು. ಏಕಾಏಕಿ 33 ಕೆವಿ ವಿದ್ಯುತ್ ಕಡಿತ ಮಾಡಿ ಲೈನ್ ಕ್ಲಿಯರೆನ್ಸ್ ಮಾಡದೇ ಸರ್ಕಾರಿ ರಜಾದಿನಗಳಲ್ಲಿ ಎಲ್‌ಸಿ ಮಾಡಬೇಕು. ಇದರಿಂದ ವ್ಯಾಪಾರ ವಹಿವಾಟಿಗೆ ಆಗುವ ಅನಾಹುತ ತಪ್ಪಿಸಬಹುದು ಎಂದು ಜನತೆ ಮನವಿ ಮಾಡಿದರು.

ಈ ಬಾರಿ ವಿದ್ಯುತ್ ಬಿಲ್ ಹೆಚ್ಚಾಗಿರುವ ಸಂಗತಿ ಸಭೆಯಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಯಿತು. ಆದರೆ, ಗ್ರಾಹಕರ ಪ್ರಶ್ನೆಗಳಿಗೆ ಅಧಿಕಾರಿ ವರ್ಗ ಹಾಗೂ ಗುತ್ತಿಗೆದಾರರಿಂದ ಸಮರ್ಪಕ ಉತ್ತರ ದೊರೆಯದ ಕಾರಣ ಸಭೆಯು ಕೆಲಕಾಲ ಗೊಂದಾಲದ ಗೂಡಾಗಿ ಪರಿಣಮಿಸಿತು.
ಇದೇ ವೇಳೆ ವಿದ್ಯುತ್ ತಂತಿಗಳ ಮೇಲೆ ಬೆಳೆದಿರುವ ಮರಗಳ ಕಟಾವು ಜೊತೆಗೆ ಲೈನ್ ಕ್ಲಿಯರೆನ್ಸ್ಗಾಗಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಭರವಸೆಯೊಂದಿಗೆ ಸಭೆ ಮುಕ್ತಾಯವಾಗಿತು.


ಸಭೆಯಲ್ಲಿ ಜಿಲ್ಲಾ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಶಶಿಧರ್, ಸಾಗರ ವಿಭಾಗದ ಕಾರ್ಯಪಾಲಕ ಇಂಜಿನಿಯರ ವೆಂಕಟೇಶ್, ಹೊಸನಗರ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಶೇಖರ್, ಸಹಾಯಕ ಇಂಜಿನಿಯರ್ ಮಾಯಣ್ಣಗೌಡ, ನಗರ ಶಾಖಾಧಿಕಾರಿ ಪ್ರಕಾಶ್ ಟಾಕಣ್ಣನವರ್, ರಿಪ್ಪನ್‌ಪೇಟೆಯ ಸಹಾಯಕ ಇಂಜಿನಿಯರ್ ಶಂಕರ್ ಖದಂಮ್, ಸಹಾಯಕ ಲೆಕ್ಕಾಧಿಕಾರಿ ಎಸ್. ರಾಘವೇಂದ್ರ, ಗ್ರಾಹಕರಾದ ಕುಂಬತ್ತಿ ಗಣೇಶ್ ಐತಾಳ್, ಉದ್ಯಮಿ ಶ್ರೀಷಾ, ಮುಡಬಾಗಿಲು ರಮಾನಂದ, ಅರೆಮನೆ ವಿನಾಯಕ್, ಬಿ.ಎಸ್. ಸುರೇಶ್. ರಾಜಶ್ರೀ, ಕಲಕೈ ಸ್ವರೂಪ್, ಎಂ.ವಿ.ಜಯರಾಮ್, ಪ್ರಿಯಾಂಕ ಪೂರ್ಣೆಶ್, ವಿಠಲ್ ರಾವ್ ಸೇರಿದಂತೆ ಹಲವರು ಹಾಜರಿದ್ದರು.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

6 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

7 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

14 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

14 hours ago