ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತಪ್ರತಿಭೆ ಹೊರತರಬೇಕು ; ಬೇಳೂರು ಗೋಪಾಲಕೃಷ್ಣ

0 217

ರಿಪ್ಪನ್‌ಪೇಟೆ: ಗ್ರಾಮೀಣ ಪ್ರದೇಶದಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಲ್ಲಿ ಆಗಾಧವಾದ ಪ್ರತಿಭೆ ಚಾಣಾಕ್ಷತನ ಇರುತ್ತದೆ. ಅಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ ಹೊರ ತಂದಾಗ ಮಾತ್ರ ಆ ಮಕ್ಕಳು ಮುಖ್ಯವಾಹಿನಿಗೆ ಬರುತ್ತಾರೆ. ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕೆಲಸ ಶಾಲಾ ಶಿಕ್ಷಕರು ಮತ್ತು ಪೋಷಕರದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾದ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಯ್ಕೆಯಾದ ಚಿಕ್ಕಜೇನಿ ಪ್ರೌಢಶಾಲೆಯ ವಿದ್ಯಾರ್ಥಿ ಕು|| ಅಭಿಷೇಕನಿಗೆ ಪೌರ ಸನ್ಮಾನ ಮತ್ತು 2022-23ನೇ ಸಾಲಿನ ಅತ್ಯುನ್ನತ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಆಯ್ಕೆಯಾದ ಚಿಕ್ಕಜೇನಿ ಪ್ರೌಢಶಾಲೆಯ ವಿದ್ಯಾರ್ಥಿ ಕು|| ಅಭಿಷೇಕನನ್ನು ಸನ್ಮಾನಿಸಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 85ಕ್ಕಿಂತ ಅಧಿಕ ಅಂಕಗಳಿಸಿದ 11 ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯ್ತಿ ಸದಸ್ಯ ಅಣ್ಣಪ್ಪ ಶೆಟ್ಟರು ತಲಾ 500 ರೂ ಹಣ ನೀಡಿ ಪ್ರತಿಭಾ ಪುರಸ್ಕಾರ ನೀಡಿದರು.

ಎಸ್.ಡಿ.ಎಂ.ಸಿ.ಆಧ್ಯಕ್ಷ ಕೆ.ಉಮೇಶ್ ಆಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ, ಮುಖ್ಯ ಆತಿಥಿಗಳಾಗಿ ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಬಿ.ಜೆ.ಚಂದ್ರಮೌಳಿ, ಚಿಕ್ಕಜೇನಿ ಗ್ರಾಮ ಪಂಚಾಯ್ತಿ ಆಧ್ಯಕ್ಷ ಎನ್.ಪಿ.ರಾಜು, ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ವೆಂಕಟಾಚಲ, ಭದ್ರಪ್ಪಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಕರಿಬಸಪ್ಪ, ಸಂತೋಷ, ಮಂಜುಳಾ, ಅರವಿಂದಭಟ್, ಶಶಿಕುಮಾರ್‌ ಜೇನಿ, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿವಾಜಿ ಹಾಗೂ ಪ್ರೌಢಶಾಲೆಯ ಸಹ ಶಿಕ್ಷಕ ವೃಂದ ಗ್ರಾಮಸ್ಥರು ಹಾಜರಿದ್ದರು. ನಂತರ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Leave A Reply

Your email address will not be published.

error: Content is protected !!