ಜು.19 ರಂದು ಹೊಸನಗರದಲ್ಲಿ ಪತ್ರಿಕಾ ದಿನಾಚರಣೆ ; ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ

0 56


ಹೊಸನಗರ: ಪಟ್ಟಣದ ಆರ್ಯ ಈಡಿಗರ ಸಭಾಭವನದಲ್ಲಿ ಜುಲೈ 19 ರಂದು ಬೆಳಿಗ್ಗೆ 11ಗಂಟೆಯಿಂದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹೊಸನಗರ ಶಾಖೆಯ ವತಿಯಿಂದ ಪತ್ರಿಕಾ ದಿನಾಚರಣೆ ಹಾಗೂ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಭಿಯಾನವನ್ನು ಏರ್ಪಡಿಸಲಾಗಿದೆ ಎಂದು ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಂ.ಕೆ ವೆಂಕಟೇಶ್‌ಮೂರ್ತಿಯವರು ತಿಳಿಸಿದ್ದಾರೆ.


ಈ ಕಾರ್ಯಕ್ರಮವನ್ನು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಲಿದ್ದು, ಸಮಕಾಲಿನ ಪತ್ರಿಕಾ ಮಾಧ್ಯಮದ ಜವಾಬ್ದಾರಿಗಳು ಎಂಬ ವಿಷಯವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರು ಉಪನ್ಯಾಸ ನೀಡಲಿದ್ದಾರೆ. ವಿದ್ಯಾರ್ಥಿಗಳಲ್ಲಿ ಮಾದಕ ವ್ಯಸನ ದುಷ್ಪರಿಣಾಮಗಳು ಎಂಬ ವಿಷಯವಾಗಿ ಡಾ|| ಹೆಚ್.ಕೆ ಶ್ರೀಪತಿ ಹಳಗುಂದರವರು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಲಿದ್ದಾರೆ.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಕೆ ವೆಂಕಟೇಶ್‌ರವರು ವಹಿಸಲಿದ್ದು ಮುಖ್ಯ ಅತಿಥಿಯಾಗಿ ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಜಿಲ್ಲಾ ರಕ್ಷಣಾಧಿಕಾರಿ ಮಿಥನ್‌ಕುಮಾರ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್.ಮಾರುತಿ, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್ ಯಡಗೆರೆ, ಜಿಲ್ಲಾ ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್ ಮಂಜುನಾಥ್, ಜಿಲ್ಲಾ ಪತ್ರಕರ್ಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಕಾಚಿನಕಟ್ಟೆ ಇನ್ನೂ ಮುಂತಾದವರು ಆಗಮಿಸಲಿದ್ದಾರೆ.


ಈ ಸಮಾರಂಭದಲ್ಲಿ ಜಿಲ್ಲಾ ಪತ್ರಿಕಾ ಮಾಧ್ಯಮ ಪುರಸ್ಕೃತರಿಗೆ, ಈ ಬಾರಿ ಎಸ್‌ಎಸ್‌ಎಲ್‌ಸಿಯಲ್ಲಿ ತಾಲ್ಲೂಕಿನಲ್ಲಿ ಹೆಚ್ಚು ಅಂಕ ಪಡೆದವರಿಗೆ ಹಾಗೂ ತಾಲ್ಲೂಕಿನ ಆಯ್ದ ಪತ್ರಿಕಾ ವಿತರಿಕರಿಗೆ ಸನ್ಮಾನ ಸಮಾರಂಭವನ್ನು ಏರ್ಪಡಿಸಲಾಗಿದೆ. ತಾಲ್ಲೂಕಿನ ಎಲ್ಲಾ ಪತ್ರಕರ್ತರು ಹಾಗೂ ಸಾರ್ವಜನಿಕರು, ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಕೊಡಬೇಕೆಂದು ಈ ಮೂಲಕ ಕೇಳಿಕೊಂಡಿದ್ದಾರೆ.

Leave A Reply

Your email address will not be published.

error: Content is protected !!