ನೇಣಿಗೆ ಕೊರಳೊಡ್ಡಿದ 9ನೇ ತರಗತಿ ವಿದ್ಯಾರ್ಥಿನಿ !

0 1,851

ರಿಪ್ಪನ್‌ಪೇಟೆ : 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು (Student) ನೇಣು (Hanging) ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಇಲ್ಲಿನ ಬಾಳೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.

ರಿಪ್ಪನ್‌ಪೇಟೆ ಪಟ್ಟಣದ ಪ್ರೌಢ ಶಾಲೆಯೊಂದರಲ್ಲಿ 9ನೇ ತರಗತಿ ಓದುತ್ತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಘಟನಾ ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರವಾನಿಸಾಗಿದೆ.

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.

Leave A Reply

Your email address will not be published.

error: Content is protected !!