ಪುರಪ್ಪೆಮನೆ ಗ್ರಾ.ಪಂ. ಅಧ್ಯಕ್ಷರಾಗಿ ಸುಜಾತ, ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧ ಆಯ್ಕೆ

0 70


ಹೊಸನಗರ: ಪರುಪ್ಪೆಮನೆ ಗ್ರಾಮ ಪಂಚಾಯತಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯು ಸೋಮವಾರ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆದಿದ್ದು ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಸುಜಾತ ದಿನೇಶ್ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ‌ ಬೆಂಬಲಿತ ಸದಸ್ಯ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಚುನಾವಣಾ ಕಾರ್ಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್ ಕೃಷ್ಣಮೂರ್ತಿ ನೆರವೇರಿಸಿದ್ದು ಪಿಡಿಓ ಜಗದೀಶ್ ಕೆ ನಾಡವಾಡಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ತಾಲ್ಲೂಕು ಬಿಜೆಪಿ ಅಧ್ಯಕ್ಷ ಗಣಪತಿ ಬೆಳಗೋಡು, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಮೌಳಿ, ಎರಗಿ ಉಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ್, ಸಮಾಜ ಸೇವಕ ರವಿಕುಮಾರ್ ಹಾಗೂ ಗ್ರಾಮಸ್ಥರು ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದಿಸಿದರು.

Leave A Reply

Your email address will not be published.

error: Content is protected !!