Categories: Hosanagara News

ಪೂರ್ವಜರ ಕಠಿಣ ಪರಿಶ್ರಮದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ‌ ; ಡಿ.ಆರ್ ಯೂಸುಫ್


ಹೊಸನಗರ: ನಮಗೆ ಸ್ವಾತಂತ್ರ್ಯವು ಸುಲಭವಾಗಿ ಸಿಕ್ಕಿಲ್ಲ ಪೂರ್ವಜರ ಕಠಿಣ ಪರಿಶ್ರಮದ ಜೊತೆಗೆ ಛಲ ಮನಸ್ಸಿನಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದೆ ಅದನ್ನು ಇಂದಿನ ಯುವ ಜನತೆ ಸದುಪಯೋಗ ಪಡಿಸಿಕೊಳ್ಳಬೇಕೆಂದು ಬದ್ರಿಯಾ ಜುಮ್ಮ ಮಸೀದಿಯ ಗೌರವಾಧ್ಯಕ್ಷರಾದ ಡಿ.ಆರ್ ಯೂಸುಫ್‌ರವರು ಹೇಳಿದರು.

ಪಟ್ಟಣದ ಬದ್ರಿಯಾ ಜುಮ್ಮ ಮಸೀದಿಯ ಆವರಣದಲ್ಲಿ ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ನಾವು ಸ್ವಾತಂತ್ರ್ಯ ದಿನಾಚರಣೆಯನ್ನು ಬರೀ ಆಚರಣೆ ಮಾಡಿ ಸುಮ್ಮನಿದ್ದರೇ ಸಾಲದು ನಮ್ಮ ಜೀವನದಲ್ಲಿ ಹಿರಿಯರ ತತ್ವ ಸಿದ್ದಾಂತಗಳನ್ನು ಅಳವಡಿಸಿಕೊಳ್ಳುವ ಮೂಲಕ ನಮ್ಮ ಮುಂದಿನ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಹಾಗೂ ದೇಶ ಪ್ರೇಮ ಜೊತೆಗೆ ದೇಶದ ಮಣ್ಣಿನ ಋಣ ನಮ್ಮ ಮೇಲಿದೆ ನಾವು ವಾಸ ಮಾಡುವ ಊರು, ರಾಜ್ಯ, ದೇಶವನ್ನು ಪ್ರೀತಿ ಮಾಡಬೇಕು ಈ ದೇಶಕ್ಕೆ ಆಪತ್ತು ಬಂದಾಗ ಅದನ್ನು ಎದುರಿಸುವ ಶಕ್ತಿ ನಮ್ಮಲ್ಲಿರಬೇಕು ಇದು ನಮಗೆ ಮಹಮದ್ ಪೈಗಂಬರ್ ಹೇಳಿಕೊಟ್ಟ ಪಾಠ ಅದನ್ನು ಮೈಗೂಡಿಸಿಕೊಂಡು ಹಿರಿಯರು ಹೇಳಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕೆಂದರು.


ಈ 77ನೇ ಸ್ವಾತಂತ್ರ್ಯ ಕಾರ್ಯಕ್ರಮದಲ್ಲಿ ಮಸೀದಿಯ ಧರ್ಮಗುರುಗಳಾದ ಡಿ.ಎಂ ಅಬೂಬಕರ್ ಮದನಿ ಹಾಗೂ ಬದುರುದ್ದೀನ್ ಝುಹರಿ, ಕಮಿಟಿಯ ಅಧ್ಯಕ್ಷರಾದ ಅಮಾನುಲ್ಲಾ ಹಾಗೂ ಅಹಮದ್ ಸಾಬ್ ಯೂಸುಬ್‌ಸಾಬ್, ಇಸ್ಮಾಯಿಲ್, ಅಬ್ದುಲ್ ರಹೂಫ್, ಯಾಸಿರ್ ಯಾಸೀರ್, ಇಬ್ರಾಹಿಂ ಉಸ್ಮಾನ್ ಸಾಬ್, ಹಯಾತುಲ್ ಇಸ್ಲಾಂ ಅರಬ್ಬಿ ಮದರಸದ ವಿದ್ಯಾರ್ಥಿಗಳು ಹಾಗೂ ಊರಿನ ಹಲವಾರು ಪ್ರಮುಖರು ಬಾಗವಹಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago