ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ ; ಧನಲಕ್ಷ್ಮಿ ಗಂಗಾಧರ್

0 309

ರಿಪ್ಪನ್‌ಪೇಟೆ : ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕೆಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು ಹೇಳಿದರು.

ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪೋಲಿಯೋದಿಂದ ಮಕ್ಕಳನ್ನು ರಕ್ಷಿಸಲು ಹಾಗೂ ಅವರ ರೋಗ ನಿರೋಧಕತೆಯನ್ನು ಹೆಚ್ಚಿಸಲು ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಲಸಿಕಾ ಕೇಂದ್ರಗಳಿಗೆ ಕರೆದೊಯ್ದು ಪೋಲಿಯೋ ಲಸಿಕೆಯನ್ನು ಹಾಕಿಸಬೇಕು. ಪಲ್ಸ್ ಪೋಲಿಯೋ ಲಸಿಕೆ ಕುರಿತು ಅರಿವು ಮೂಡಿಸುವಲ್ಲಿ ಹಾಗೂ ಅದರಿಂದ ಉಂಟಾಗುವ ಅಂಗವೈಕಲ್ಯತೆ ಪರಿಣಾಮವನ್ನು ತಡೆಗಟ್ಟುವಲ್ಲಿ ಆರೋಗ್ಯ ಇಲಾಖೆಯ ಪಾತ್ರ ಮಹತ್ತರವಾದದ್ದು ಎಂದರು.

ಕಾರ್ಯಕ್ರಮದಲ್ಲಿ ರಿಪ್ಪನ್‌ಪೇಟೆ ರೋಟರಿ ಕ್ಲಬ್‌ನ ಅಧ್ಯಕ್ಷ ಹೆಚ್ ದೇವದಾಸ್ ಆಚಾರ್ಯ ಮಾತನಾಡಿ, ಇಡೀ ವಿಶ್ವವನ್ನೇ ಪೋಲಿಯೋ ಮುಕ್ತ ವಿಶ್ವವನ್ನಾಗಿ ಮಾಡುವ ಸದುದ್ದೇಶದಿಂದ ಅಂತರಾಷ್ಟ್ರೀಯ ಸಂಸ್ಥೆಯಾದ ರೋಟರಿ ಸಂಸ್ಥೆ ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಕೈಜೋಡಿಸಿ ಪೋಲಿಯೋ ನಿರ್ಮೂಲನಕ್ಕಾಗಿ ಕೋಟ್ಯಂತರ ರೂಪಾಯಿಗಳ ಆರ್ಥಿಕ ನೆರವನ್ನು ನೀಡಿದೆ ಎಂದರು.

ಶಿವಮೊಗ್ಗ ಜಿಲ್ಲೆಯ ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ವೈದ್ಯ ಅಧಿಕಾರಿ ಡಾ. ವೆಂಕಟೇಶ್ ಮಾತನಾಡಿ, ಜಿಲ್ಲೆಯ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಮಾಹಿತಿ ನೀಡಿ 5 ವರ್ಷದೊಳಗಿನ ಮಕ್ಕಳು ತಪ್ಪದೆ ಲಸಿಕೆಯನ್ನು ಹಾಕಿಸಿ. ಇದಕ್ಕಾಗಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕಾ ಕೇಂದ್ರಗಳು ತೆರೆಯಲಾಗಿದೆ ಹಾಗೂ ಇದಕ್ಕಾಗಿಯೇ ಮೇಲ್ವಿಚಾರಕರು ಮತ್ತು ಸಿಬ್ಬಂದಿ ವರ್ಗದ ನೇಮಿಸಲಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ರೋಟರಿ ಸಂಸ್ಥೆಯ ರಾಮಚಂದ್ರ ಕೆರೆಹಳ್ಳಿ, ಹುಗುಡಿ ವರ್ತೇಶ್, ರಾಧಾಕೃಷ್ಣ ಜೆ, ಆರ್. ಗಣೇಶ್, ಸಬಾಸ್ಟಿನ್, ಜಿಲ್ಲಾ ಆರೋಗ್ಯ ನಿರೀಕ್ಷಕ ಶ್ರೀನಿವಾಸ್, ರಿಪ್ಪನ್‌ಪೇಟೆ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಆಂಜನೇಯ,
ಅಧಿಕಾರಿಗಳು ಉಪಸ್ಥಿತರಿದ್ದರು.

Leave A Reply

Your email address will not be published.

error: Content is protected !!