ಫೆ. 7 ರಂದು ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

0 361

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವವು ಫೆಬ್ರವರಿ 7 ರಂದು ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆಯವರೆಗೆ ನಡೆಯಲಿದೆ ಎಂದು ದೇವಸ್ಥಾನ ಧರ್ಮದರ್ಶಿ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುಮಾರು 600 ವರ್ಷ ಇತಿಹಾಸವಿರುವ ಈ ಮಾರಿಕಾಂಬಾ ದೇವಿ ಜಾತ್ರೆ ಪ್ರತಿ ವರ್ಷದಲ್ಲಿ ಎರಡು ಬಾರಿ ಜರುಗುತ್ತದೆ. ಕರ್ನಾಟಕದ ಯಾವ ಭಾಗದಲ್ಲೂ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆ ಎರಡು ಬಾರಿ ನಡೆಯುವುದಿಲ್ಲ. ಮಳೆಗಾಲದ ಆಷಾಢ ಮಾಸದ ಮಂಗಳವಾರ ಹಾಗೂ ಬೇಸಿಗೆಯ ಶೂನ್ಯ ಮಾಸದ ಬುಧವಾರದಂದು ಜರುಗುವ ಈ ಜಾತ್ರೆಯಲ್ಲಿ ಜಿಲ್ಲೆ, ರಾಜ್ಯ ಹಾಗೂ ಹೊರರಾಜ್ಯದ ಸಾವಿರಾರು ಭಕ್ತರು ಆಗಮಿಸಿ ಶ್ರೀದೇವಿಗೆ ಪೂಜೆ ಸಲ್ಲಿಸುತ್ತಾರೆ.

ಮಳೆಗಾಲದಲ್ಲಿ ಭಕ್ತರು ತಮ್ಮ ಜಮೀನಿನಲ್ಲಿ ಹಾಕಲಾದ ಫಸಲಿಗೆ ಕಾಡು ಪ್ರಾಣಿಗಳ ಉಪಟಳ ಹಾಗೂ ರೋಗ ರುಜಿನೆ ಬಾರದಂತೆ, ಹೆಣ್ಣು ಮಕ್ಕಳಿಗೆ ವಿವಾಹ ಭಾಗ್ಯ ಹೀಗೆ ಸಂತಾನ ವೃದ್ಧಿಗಾಗಿ ಪ್ರಾರ್ಥಿಸಿ ಹರಕೆ ಕಾಣಿಕೆ, ಹಣ್ಣು-ಕಾಯಿ ಪೂಜೆ ಸಲ್ಲಿಸುವುದು ಇಲ್ಲಿನ ಪದ್ದತಿಯಾಗಿದೆ.

Leave A Reply

Your email address will not be published.

error: Content is protected !!