ಬರುವ ಶೈಕ್ಷಣಿಕ ವರ್ಷದಿಂದ 500 ಹೊಸ ಕೆಪಿಎಸ್ ಶಾಲೆ ಆರಂಭಿಸುವ ಚಿಂತನೆ ; ಮಧು ಬಂಗಾರಪ್ಪ

ರಿಪ್ಪನ್‌ಪೇಟೆ: ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಒಂದೊಂದಕ್ಕೆ ಉತ್ತರ ಕೊಡುವುದು “ಕರ್ನಾಟಕ ಪಬ್ಲಿಕ್ ಸ್ಕೂಲ್’’ ಕನ್ನಡ ಶಾಲೆಗಳನ್ನು ಬಂದ್ ಮಾಡುವುದು ಎಂದರೇ ಜೇನುಗೂಡಿಗೆ ಕಲ್ಲು ಹೊಡೆದಂತೆ ಆದರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕನ್ನಡ ಪಠ್ಯದೊಂದಿಗೆ ಇಂಗ್ಲಿಷ್ ಬೋಧನೆಯನ್ನು ಮಾಡುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಗೆ ಪ್ರಗತಿಗೆ ಕಾರಣವಾಗುವುದೆಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.    


ರಿಪ್ಪನ್‌ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದ “ಕರ್ನಾಟಕ ಪಬ್ಲಿಕ್ ಸ್ಕೂಲ್’’ನ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ ಎಲ್.ಕೆ.ಜಿ. ಯು.ಕೆ.ಜಿ.ಯಿಂದ ಪಿ.ಯು.ಸಿ.ವರಗೆ ಒಂದೇ ಸೂರಿನಡಿ ಮಗು 14 ವರ್ಷ ಕಾಲ ಕರ್ನಾಟಕ ಪಬ್ಲಿಕ್ ಸ್ಕೂಲ್ ವ್ಯಾಸಂಗ ಮಾಡಲು ಸಹಕಾರಿಯಾಗಿದೆ.

ಶಿಕ್ಷಣ ಇಲಾಖೆಯ ಈ ಹಿಂದಿನ ಸರ್ಕಾರಗಳ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ  ಈ ಕಾರ್ಯವನ್ನು ಪ್ರಶಂಸಿಸಿ ಕೆಲವು ಮಾರ್ಪಡುಗಳೊಂದಿಗೆ ಬರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶದ 500 ಕ್ಕೂ ಅಧಿಕ ಕಡೆಯಲ್ಲಿ ಕೆಪಿಎಸ್ ಶಾಲೆಗಳನ್ನು ಆರಂಭಿಸಲಾಗುವುದೆಂದು ಸಚಿವರು ಘೋಷಿಸಿದರು.

ಈಗಾಗಲೇ ರಾಜ್ಯದಲ್ಲಿ 13 ಸಾವಿರ ಶಿಕ್ಷಕರ ನೇಮಕಾತಿಯನ್ನು ಮಾಡಲಾಗಿ ಕಾನೂನಿನ ತೊಡಕಿನಿಂದಾಗಿ ವಿಳಂಬವಾಗಿದೆ ಇನ್ನೂ ಒಂದು ಎರಡು ತಿಂಗಳಲ್ಲಿ ಸಮಸ್ಯೆ ನಿವಾರಣೆಗೊಳಿಸಿ ನೇಮಕಾತಿಗೊಂಡಿರುವ ಶಿಕ್ಷಕರನ್ನು ನಿಯುಕ್ತಿಗೊಳಿಸಲಾಗುವುದು ಎಂದ ಅವರು, ಇನ್ನೂ 43 ಸಾವಿರ ಶಿಕ್ಷಕರನ್ನು ಖಾಯಂಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದೆಂದು ಹೇಳಿದರು.

ಯಾವುದೇ ಮಗು  ಶಿಕ್ಷಣದಿಂದ ವಂಚಿತರಾಗದಂತೆ ಮಾಡುವುದೇ ನಮ್ಮ ಸರ್ಕಾರದ ಮೂಲ ಗುರಿಯಾಗಿದ್ದು 2500 ಕೋಟಿ ರೂ. ವೆಚ್ಚದಲ್ಲಿ ರಾಜ್ಯದಲ್ಲಿನ ಪ್ರತಿ 2 ಗ್ರಾಮ ಪಂಚಾಯ್ತಿಗೆ ಒಂದರಂತೆ 3 ಸಾವಿರ ಶಾಲೆಗಳನ್ನು ಉನ್ನತೀಕರಿಸುವುದರೊಂದಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೂಲಕ  ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಉತ್ತೇಜನ ನೀಡಲಾಗುವುದೆಂದು ವಿವರಿಸಿದರು.

ಶಾಲೆಗಳಿಗೆ ವಿದ್ಯುತ್ ನೀರು ಉಚಿತ:
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ನವೆಂಬರ್ ತಿಂಗಳಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯುತ್ ಮತ್ತಿ ನೀರಿನ ಬಿಲ್ ಸಂದಾಯ ಮಾಡದಂತೆ ಸರ್ಕಾರವೇ ಭರಿಸುವುದಾಗಿ ಘೋಷಿಸಲಾಗಿದ್ದು ಇದರಿಂದಾಗಿ ರಾಜ್ಯದಲ್ಲಿನ ಹಲವು ಶಾಲೆಗಳಲ್ಲಿ ದೂಳು ಹಿಡಿಯವಂತಾಗಿರುವ ಗಣಕ ಯಂತ್ರಗಳು ಪುನಃ ಕಾರ್ಯಾರಂಭ ಮಾಡಿವೆ. ಇದರಿಂದಾಗಿ ಮಕ್ಕಳ ಪಠ್ಯಕಲಿಕೆಯೊಂದಿಗೆ ಕಂಪ್ಯೂಟರ್ ಜ್ಞಾನ ವೃದ್ಧಿಯಾಗುವುದೆಂದ ಅವರು   ಶಾಲಾ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ, ಹಾಲು ನೀಡುವುದರೊಂದಿಗೆ ಮಕ್ಕಳ ಪೌಷ್ಟಿಕಾಂಶದ ಕೊರತೆಯನ್ನು ದೂರ ಮಾಡಲಾಗುತ್ತಿದ್ದು ಈ ತಿಂಗಳ ಅಂತ್ಯದೊಳಗೆ ರಾಗಿ ಮಾಲ್ಟ್ ಸಹ ನೀಡಲಾಗುವುದು ಇದರಿಂದ ರಾಜ್ಯದ 60 ಲಕ್ಷ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ದೊರೆಯಲಿದ್ದು ಕೇಂದ್ರ ಸರ್ಕಾರದ ಆಹಾರ ಇಲಾಖೆಯ ಅನುಮತಿಗಾಗಿ ಯೋಜನೆ ಅನುಷ್ಟಾನ ವಿಳಂಬವಾಗಿದೆ.
– ಮಧು ಬಂಗಾರಪ್ಪ, ಶಿಕ್ಷಣ ಸಚಿವ

ಸಾಗರ ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಮಕ್ಕಳನ್ನು ಶಾಲೆಗೆ ದಾಖಲಿಸದೇ ಇರುವ ಪೊಷಕ ವರ್ಗದವರ ಮೇಲೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಕಾನೂನು ಜಾರಿಯಾಗಬೇಕು ಎಂದು ಹೇಳಿ, ಕಡ್ಡಾಯವಾಗಿ ಮಕ್ಕಳಿಗೆ ಶಿಕ್ಷಣ ಕೊಡಿಸುವ ಕೆಲಸ ಸರ್ಕಾರ ಮಾಡಿದೆ ಇದರೊಂದಿಗೆ ಸಮವಸ್ತ್ರ, ಶೂ, ಮಧ್ಯಾಹ್ನದ ಬಿಸಿಯೂಟ, ಉಚಿತ ಶಿಕ್ಷಣ ಪಠ್ಯಪುಸ್ತಕ ಮೇರಿಟ್ ಮೂಲಕ ನುರಿತ ಶಿಕ್ಷಕರುಗಳು ಆಯ್ಕೆಯಾಗಿ ಬಂದರು ಕೂಡಾ ನಮ್ಮ ಪೋಷಕರು ಖಾಸಗಿ ವ್ಯಾಮೋಹಕ್ಕೆ ಜೋತು ಬಿದ್ದಿದ್ದಾರೆಂದು ವಿಷಾದ ವ್ಯಕ್ತಪಡಿಸಿ, ಕಡ್ಡಾಯವಾಗಿ ಸರ್ಕಾರಿ ಶಾಲೆಗಳಿಗೆ ಹೆಚ್ಚು ಮಕ್ಕಳನ್ನು ದಾಖಲಿಸಲು ಮನವಿ ಮಾಡಿದರು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಾಲೆಗಳು ವ್ಯಕ್ತಿ ನಿರ್ಮಾಣದ ಕೇಂದ್ರಗಳು. ನೈತಿಕ ಶಿಕ್ಷಣದೊಂದಿಗೆ ವಿದಾರ್ಥಿಗಳ ಬದುಕಿನೊಂದಿಗೆ ಸಾಮಾಜಿಕ ರಾಷ್ಟ್ರೀಯತೆ ಮನೋಭಾವನೆ ಬೆಳಸುವಂತಾಗಿ ಮಗುವಿನ ಮಾನಸಿಕ ವಿಕಸನಕ್ಕೆ ಕಾರಣವಾಗಲಿ ಎಂದರು.

ತಹಶೀಲ್ದಾರ್, ಬಿಇಓಗೆ ನೋಟಿಸ್ ನೀಡಲು ಸಚಿವರ ಸೂಚನೆ
ಇಂದಿನ ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಆಹ್ವಾನಿಸಿಲ್ಲ ಏಕೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವರು ಸಿಡಿಮಿಡಿಗೊಂಡು ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರ್‌ರಿಗೆ ನೋಟಿಸ್ ನೀಡುವಂತೆ ಸೂಚಿಸಿ ನಾನು ಹೇಳುತ್ತಿದ್ದೇನೆ ಬನ್ನಿ ಎಂದು ಸಚಿವ ಮಧು ಬಂಗಾರಪ್ಪ ಪತ್ರಕರ್ತರನ್ನು ನೂತನ ಶಾಲಾ ಕಟ್ಟಡ ಉದ್ಘಾಟನೆಗೆ ಆಹ್ವಾನಿಸಿದರು.

ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಸದಸ್ಯ ಬಂಡಿ ರಾಮಚಂದ್ರ,ಗ್ರಾಮ ಪಂಚಾಯ್ತಿ ಅಧ್ಯಕ್ಷ ವಿಶ್ವನಾಥ ಗಂದ್ರಳ್ಳಿ, ಉಪಾಧ್ಯಕ್ಷೆ ವಿನೋಧ, ಗ್ರಾಮ ಪಂಚಾಯ್ತಿ ಸದಸ್ಯರಾದ ಮಂಜುಳಾ, ಲಿಂಗರಾಜ್, ಸುರೇಶ್, ದೇವರಾಜ್, ಸುವರ್ಣ, ಕುಸುಮ, ಮಮತ, ಎಇಡಿಸಿ ಉಪಾಧ್ಯಕ್ಷ ಟಿ.ಡಿ.ಸೋಮಶೇಖರ, ನಾಗೇಶ್ ಉಂಬ್ಳೆಬೈಲು, ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ, ತಹಶೀಲ್ದಾರ್ ರಶ್ಮಿ, ಪ್ರಾಚಾರ್ಯ ಮಹಮದ್‌ನಜ್ವತ್ ಉಲ್ಲಾ, ಸತ್ಯನಾರಾಯಣ, ಪ್ರಭಾವತಿ ಹೆಗಡೆ, ಶ್ರೀದೇವಿ ಇನ್ನಿತರರು ಹಾಜರಿದ್ದರು.

ನಿತೀಶ ಸಂಗಡಿಗರು ಪ್ರಾರ್ಥಿಸಿದರು. ಬಿಇಓ ಹೆಚ್.ಆರ್.ಕೃಷ್ಣಮೂರ್ತಿ ಸ್ವಾಗತಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago