ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ಘೋಷಿಸಿರುವುದು ಹರ್ಷ ತಂದಿದೆ ; ಮೂಲೆಗದ್ದೆ ಶ್ರೀಗಳು

0 221

ರಿಪ್ಪನ್‌ಪೇಟೆ: 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವ ಕಲ್ಪನೆ ನೀಡಿದ ಜಗಜ್ಯೋತಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿರುವುದು ಹರ್ಷತಂದಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿ ಸಿದ್ದರಾಮಯ್ಯ ಸರ್ಕಾರವನ್ನು ಅಭಿನಂದಿಸಿದ್ದಾರೆ.

ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕನ್ನಡದ ನೆಲದ ಗುರು. ವಿಶ್ವ ಗುರುಬಸವಣ್ಣ. ಅನುಭವ ಮಂಟಪದ ಮೂಲಕ ವರ್ಗ, ವರ್ಣರಹಿತ ಸಮಾಜ ನಿರ್ಮಾಣಕ್ಕಾಗಿ ಪ್ರಯತ್ನಿಸಿದ್ದರು. ಆ ಹಿನ್ನಲೆಯಲ್ಲಿ ಅವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸುವಂತೆ ಎಲ್ಲ ಸಮುದಾಯವರು ಹಾಗೂ ಮಠಾಧೀಶರ ಒತ್ತಾಯವಿತ್ತು. ಅದಕ್ಕೆ ಸರ್ಕಾರ ಸ್ಪಂದಿಸುವ ಮೂಲಕ ಪ್ರಜಾಪ್ರಭುತ್ವ ಸಂವಿಧಾನದ ಆಶಯಗಳಿಗೆ ಅನುರೂಪವಾದ ಅವರ ಚಿಂತನೆಗಳು ಬಸವಣ್ಣನವರ ಸಾಂಸ್ಕೃತಿಕ ನಾಯಕತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿವೆ ಎಂದು ಹೇಳಿದರು.

ಅವರ ವಚನಗಳು ಇಂದಿನ ಸಮುದಾಯಕ್ಕೆ ಸರಳವಾಗಿದ್ದು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಸ್ತ್ರೀ ಸಮಾನತೆಯೊಂದಿಗೆ ಜೀವನದ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಎಲ್ಲ ಚೈತನ್ಯವನ್ನು ಸಮಾಜಕ್ಕೆ ತಂದುಕೊಟ್ಟವರು ಬಸವಣ್ಣನವರು ಎಂದು ಬಣ್ಣಿಸಿ  ಮಹಾರಾಷ್ಟ್ರಕ್ಕೆ ಶಿವಾಜಿಯಂತೆ ಕರ್ನಾಟಕಕ್ಕೆ ಬಸವೇಶ್ವರ ಎಂದು ಹೇಳಿ, ಅವರ ವಿಚಾರ ಧಾರೆ ವಿಶ್ವವ್ಯಾಪಿ ಪಸರಿಸುವಂತೆ ಮಾಡಿದ್ದಾರೆಂದು ಹೇಳಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

Leave A Reply

Your email address will not be published.

error: Content is protected !!