ರಿಪ್ಪನ್‌ಪೇಟೆ: 12ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಜಗತ್ತಿಗೆ ಪ್ರಜಾಪ್ರಭುತ್ವ ಕಲ್ಪನೆ ನೀಡಿದ ಜಗಜ್ಯೋತಿ ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕರೆಂದು ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಿರುವುದು ಹರ್ಷತಂದಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮಿಗಳು ಹೇಳಿ ಸಿದ್ದರಾಮಯ್ಯ ಸರ್ಕಾರವನ್ನು ಅಭಿನಂದಿಸಿದ್ದಾರೆ.
ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕನ್ನಡದ ನೆಲದ ಗುರು. ವಿಶ್ವ ಗುರುಬಸವಣ್ಣ. ಅನುಭವ ಮಂಟಪದ ಮೂಲಕ ವರ್ಗ, ವರ್ಣರಹಿತ ಸಮಾಜ ನಿರ್ಮಾಣಕ್ಕಾಗಿ ಪ್ರಯತ್ನಿಸಿದ್ದರು. ಆ ಹಿನ್ನಲೆಯಲ್ಲಿ ಅವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸುವಂತೆ ಎಲ್ಲ ಸಮುದಾಯವರು ಹಾಗೂ ಮಠಾಧೀಶರ ಒತ್ತಾಯವಿತ್ತು. ಅದಕ್ಕೆ ಸರ್ಕಾರ ಸ್ಪಂದಿಸುವ ಮೂಲಕ ಪ್ರಜಾಪ್ರಭುತ್ವ ಸಂವಿಧಾನದ ಆಶಯಗಳಿಗೆ ಅನುರೂಪವಾದ ಅವರ ಚಿಂತನೆಗಳು ಬಸವಣ್ಣನವರ ಸಾಂಸ್ಕೃತಿಕ ನಾಯಕತ್ವಕ್ಕೆ ಸಮರ್ಥನೀಯವಾದ ನೆಲೆ ಒದಗಿಸಿವೆ ಎಂದು ಹೇಳಿದರು.
ಅವರ ವಚನಗಳು ಇಂದಿನ ಸಮುದಾಯಕ್ಕೆ ಸರಳವಾಗಿದ್ದು ಬದುಕಿನಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಸ್ತ್ರೀ ಸಮಾನತೆಯೊಂದಿಗೆ ಜೀವನದ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಎಲ್ಲ ಚೈತನ್ಯವನ್ನು ಸಮಾಜಕ್ಕೆ ತಂದುಕೊಟ್ಟವರು ಬಸವಣ್ಣನವರು ಎಂದು ಬಣ್ಣಿಸಿ ಮಹಾರಾಷ್ಟ್ರಕ್ಕೆ ಶಿವಾಜಿಯಂತೆ ಕರ್ನಾಟಕಕ್ಕೆ ಬಸವೇಶ್ವರ ಎಂದು ಹೇಳಿ, ಅವರ ವಿಚಾರ ಧಾರೆ ವಿಶ್ವವ್ಯಾಪಿ ಪಸರಿಸುವಂತೆ ಮಾಡಿದ್ದಾರೆಂದು ಹೇಳಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…