Categories: Hosanagara News

ಬುದ್ಧಿಮಾಂದ್ಯ ಅಂಗವಿಕಲ ಮಗಳೊಂದಿಗೆ ವಾಸಿಸುತ್ತಿರುವ ಬಡ ಮಹಿಳೆಯ ಬದುಕಿಗೆ ಸಿಕ್ಕಿತೇ ಆಸರೆ ? | 6 ವರ್ಷಗಳಿಂದ ಸ್ವ‍‍ಚ್ಚ ಸಂಕೀರ್ಣ ಕಟ್ಟಡದಲ್ಲಿ ವಾಸ | ಅಂತ್ಯೋದಯ ಕಾರ್ಡ್ ಇಲ್ಲ | ಮಗಳ ಚಿಕಿತ್ಸೆಗೆ ಸ್ಪಂದಿಸುವವರಿಲ್ಲ !!

ಹೊಸನಗರ : ನಿನ್ನೆ ರಾಜ್ಯಾದ್ಯಂತ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಎಲ್ಲೆಡೆ ಜಾರಿಯಾಗುತ್ತಿದೆ ಆದರೆ ಇಲ್ಲೊಬ್ಬ ನತದೃಷ್ಟ ಲಕ್ಷ್ಮಿ ತನ್ನ ಅಂಗವಿಕಲ ಬುದ್ದಿಮಾಂದ್ಯ ಮಗಳೊಂದಿಗೆ ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತಿದ್ದಾಳೆ.

ಮಾರುತಿಪುರ ಗ್ರಾಪಂ ವ್ಯಾಪ್ತಿಯ ಮೇಲಿನಸಂಪಳ್ಳಿ‌ ಗ್ರಾಮದ ಶಶಿಕಲಾ ಎಂಬ ಮಹಿಳೆ ತನ್ನ 20 ವರ್ಷದ ಬುದ್ದಿಮಾಂದ್ಯ ಮಗಳಾದ ಪೂಜಾಳೊಂದಿಗೆ. ಮೂಲಭೂತ ಸೌಕರ್ಯಕ್ಕಾಗಿ ಅಂಗಲಾಚುತ್ತಿರುವುದು ಎಂತಹ ಕಲ್ಲು ಹೃದಯವನ್ನು ಕರಗಿಸುವಂತಿದೆ.

ಮೇಲಿನಸಂಪಳ್ಳಿ ಗ್ರಾಮದ ಶಶಿಕಲಾ ಎಂಬ ಮಹಿಳೆಯ ಮನೆಯು ಬೀಳುವ ಹಂತದಲ್ಲಿದ್ದ ಕಾರಣ ಕಳೆದ ಆರು ವರ್ಷಗಳಿಂದ ಕಸ ವಿಲೇವಾರಿ ಸ್ವಚ್ಚ ಸಂಕೀರ್ಣ ಘಟಕದಂತಿರುವ ಸಭಾ ಭವನದಲ್ಲಿ ತನ್ನ ಮಗಳೊಂದಿಗೆ ವಾಸಿಸುತಿದ್ದು ಶೌಚಾಲಯವಿಲ್ಲದೇ, ವಿದ್ಯುತ್ ಸಂಪರ್ಕವಿಲ್ಲದೇ, ನೀರಿನ ವ್ಯವಸ್ಥೆಯಿಲ್ಲದೇ ಕತ್ತಲಲ್ಲಿ ಕಾಲ ಕಳೆಯುತ್ತ ನರಕಯಾತನೆ ಅನುಭವಿಸುತ್ತಿದ್ದಾರೆ.

ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದ ಇಂಥ ಶೋಚನೀಯ ಸ್ಥಿತಿ ಎದುರಿಸುತ್ತಿದ್ದು, ಇವರ ಸಮಸ್ಯೆಗೆ ಪರಿಹಾರ ಒದಗಿಸಬೇಕಾದವರೇ ಕಂಡೂ ಕಾಣದಂತೆ ವರ್ತಿಸುತ್ತಿದ್ದಾರೆ.

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. https://fb.watch/mLLHW8LDQL/?mibextid=NnVzG8

ಬಲಾಢ್ಯರಿಗೆಲ್ಲಾ ಬಿಪಿಎಲ್ ಕಾರ್ಡ್ ನೀಡುವ ಅಧಿಕಾರಿಗಳು ಇಂತಹ ಬಡ ಮಹಿಳೆಗೆ ಅಂತ್ಯೋದಯ ಕಾರ್ಡ್ ನೀಡುವಲ್ಲಿ ಆಸಕ್ತಿ ತೋರಿಸುತ್ತಿಲ್ಲ. ಮಗಳ ಅಂಗವಿಕಲ ವೇತನದಲ್ಲಿ ಬರುವ ಅಷ್ಟೋ ಇಷ್ಟೋ ಹಣದಲ್ಲಿ ಜೀವನ ಸಾಗಿಸುತ್ತಿರುವ ಶಶಿಕಲಾ ಮತ್ತು ಆಕೆಯ ಅಂಗವಿಕಲ ಬುದ್ದಿಮಾಂದ್ಯ ಮಗಳ ಶಾಪ ನಿರ್ಲಜ್ಜ ಅಧಿಕಾರಿಗಳಿಗೆ ತಟ್ಟದೇ ಇರದು.

ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಸ್ವಚ್ಚಭಾರತ್ ಅಡಿಯಲ್ಲಿ ದೇಶಾದ್ಯಂತ ಮನೆಮನೆಗೆ ಶೌಚಾಲಯ ನೀಡಿದ್ದೇವೆ ಎಂದು ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿರುವ ಮಾರುತಿಪುರ ಗ್ರಾಮಾಡಳಿತಕ್ಕೆ ಈ ಅನಾಥ ಮಹಿಳೆ ಕಾಣದೇ ಇರುವುದು ದುರದೃಷ್ಟಕರವೇ ಸರಿ.

ಬುದ್ದಿಮಾಂದ್ಯ ಅಂಗವಿಕಲ ಮಗಳನ್ನು ಸಭಾಭವನದ ಕಟ್ಟಡದಲ್ಲಿ ಕೂಡಿಹಾಕಿ ದಿನವೆಲ್ಲಾ ಊರಿನ ನಾಲ್ಕಾರು ಮನೆಗಳಲ್ಲಿ ಆಹಾರ ಅರಸಿ ಜೀವಿಸುತ್ತಿರುವ ಈ ಶಶಿಕಲಾ ಲಜ್ಜೆಗೆಟ್ಟ ಅಧಿಕಾರಿಗಳ ನಿರ್ಲಕ್ಷ್ಯದಿಂದ ನತದೃಷ್ಟ ಲಕ್ಷ್ಮಿಯಲ್ಲದೇ ಮತ್ತಿನ್ನೇನು…!!??

ಸ್ವಂತ ಜಾಗವನ್ನು ಹೊಂದಿರುವ ಈಕೆಗೆ ಆಶ್ರಯ ಯೋಜನೆಯಡಿಯಲ್ಲಿ‌ ಮನೆ ನಿರ್ಮಿಸಿಕೊಟ್ಟು , ಬುದ್ದಿಮಾಂದ್ಯ ಅಂಗವಿಕಲ ಮಗಳ ಚಿಕಿತ್ಸೆಗೆ ನೆರವಾಗುವ ಮೂಲಕ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ತಮ್ಮ ಇಚ್ಚಾಶಕ್ತಿಯನ್ನು ಪ್ರದರ್ಶಿಸಬೇಕಾಗಿದೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago